ಸರಗೂರು: ಜೆಡಿಎಸ್ ಯುವ ನಾಯಕರಾದ ಜೈ ಪ್ರಕಾಶ್, ಹೆಚ್.ಡಿ.ಕೋಟೆ ಸರಗೂರು ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಶಾಸಕರಾಗಿ ಹೊರ ಹೊಮ್ಮಲಿದ್ದಾರೆ ಎಂದು ಪಡುವಲುಮಠದ ಶ್ರೀಗಳಾದ ಮಹದೇವಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಪಟ್ಟಣದ ಎರಡನೇಯ ಮುಖ್ಯ ರಸ್ತೆಯ ಬಸವಶ್ವೇರ ದೇವಸ್ಥಾನ ದ ಬಳಿ ಆಯೋಜಿಸಲಾಗಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವೇಳೆ ಸ್ವಾಮೀಜಿ ಈ ಭವಿಷ್ಯ ನುಡಿದರು. ಇದೇ ವೇಳೆ ಹನುಮ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜೈ ಪ್ರಕಾಶ್, ಕೊವಿಡ್ ತಡೆಗಟ್ಟಲು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು. ಇದೇ ವೇಳೆ ಸ್ವಾಮೀಜಿಗೆ ಹೇಳಿದ ಭವಿಷ್ಯಕ್ಕೆ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಭರತ್ ಜೋಯಿಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಹಂಚಿಪುರ ಗುರುಸ್ವಾಮಿ, ಪಟ್ಟಣ ಪಂಚಾಯಿತಿ ಸದಸ್ಯರು ದಿವ್ಯ ನವೀನ್ ಕುಮಾರ್, ಸುಮರಾಮಚಂದ್ರ, ಶಿವಕುಮಾರ್(ವಿರೇಶ್) ಮುಖಂಡರು ರವಿ ಜಯರಾಮ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy