ಜನತಾ ಜಲಧಾರೆ ಕಾರ್ಯಕ್ರಮದ ನಂತರ ಜೆಡಿಎಸ್ ಬೆಂಗಳೂರಿನಲ್ಲಿ ಜನತಾ ಮಿತ್ರ ಎಂಬ ಕಾರ್ಯಕ್ರಮವನ್ನು ಒಂದು ತಿಂಗಳ ಕಾಲ ನಡೆಸಲು ನಿರ್ಧರಿಸಿದೆ. ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜೂ.22ರಂದು ಜನತಾ ಮಿತ್ರ ವಾಹನಗಳಿಗೆ ಚಾಲನೆ ನೀಡಲಾಗುತ್ತದೆ.
15 ವಾಹನಗಳು ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದು, ಜನರಿಗೆ ಯಾವ ರೀತಿಯ ಆಡಳಿತ ಬೇಕು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಿವೆ. ಅಲ್ಲದೆ, ಜೆಡಿಎಸ್ನ ಉದ್ದೇಶಿತ ಪಂಚರತ್ನ ಕಾರ್ಯಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತದೆ. ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಏಕೆ ಮುಖ್ಯಮಂತ್ರಿಯಾಗಬೇಕು ಎಂಬ ಬಗ್ಗೆ ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.
ಅತ್ಯಾಧುನಿಕವಾಗಿ ವಿನ್ಯಾಸಗೊಳಿಸಲಾಗಿರುವ ವಾಹನ ಪ್ರತಿ ವಿಧಾನಸಭಾ ಕ್ಷೇತ್ರದ ವಾರ್ಡ್ ನಲ್ಲೂ ಸಂಚರಿಸಲಿವೆ. ಸಾರ್ವಜನಿಕರು ಮುಂದಿನ ಸರ್ಕಾರ ಹೀಗಿರಬೇಕು ಎಂಬ ಬಗ್ಗೆ ತಮ್ಮ ಸಲಹೆಯನ್ನು ಬರೆದು ಡ್ರಾಪ್ ಬಾಕ್ಸ್ನಲ್ಲಿ ಹಾಕಬಹುದು. ಅಲ್ಲದೆ,ಮೊಬೈಲ್ ನಲ್ಲಿ ಬಾರ್ಕೋಡ್ ಸ್ಕ್ಯಾನ್ ಮಾಡಿ ವೆಬ್ ಸೈಟ್ ಮೂಲಕವೂ ಅಭಿಪ್ರಾಯ ತಿಳಿಸಬಹುದು. ಪೋಡಿಯಂನಲ್ಲಿ ಟ್ಯಾಬ್ ಲಭ್ಯವಿದ್ದು, ಅದರಲ್ಲೂ ಕೂಡ ತಮ್ಮ ಸಲಹೆಗಳನ್ನು ಬರೆಯಬಹುದಾಗಿದೆ.
ಒಂದು ತಿಂಗಳ ಕಾಲ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗೊಳ್ಳುವ ಜನತಾ ಮಿತ್ರ ಯಾತ್ರೆಯು ಜೆಡಿಎಸ್ನ ಭರವಸೆಗಳನ್ನು ತಿಳಿಸಲಿದೆ. ಒಂದು ತಿಂಗಳ ನಂತರ ಜನತಾ ಮಿತ್ರ ಸಮಾರೋಪವನ್ನು ದೊಡ್ಡ ಪ್ರಮಾಣದಲ್ಲಿ ನಡೆಸಲು ಜೆಡಿಎಸ್ ಉದ್ದೇಶಿಸಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB