ಚಾಮರಾಜನಗರ: ಜೆಡಿಎಸ್ ಇನ್ನು ಮುಂದೆ ಜಾತ್ಯಾತೀತ ಅಂತ ಹೇಳಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯಾತೀತ ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಜಾತ್ಯಾತೀತವಾಗಿ ಉಳಿದಿದೆಯೇ ? ಎಂದು ಪ್ರಶ್ನಿಸಿದರು.
ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಜೆಡಿಎಸ್ , ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ನ್ನು ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದರು.


