ತಿಪಟೂರು: ಮಾರ್ಚ್ 2ರಂದು ಸೋಮವಾರ ತಿಪಟೂರು ನಗರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಲಿದ್ದು, ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶದ ಮೂಲಕ ಬೆಳ್ಳಿ ಹಬ್ಬಆಚರಿಸಲಾಗುವುದು ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ತಿಳಿಸಿದರು
ತಿಪಟೂರಿನ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸೋಮವಾರ ಮಾರ್ಚ್ 2ರಂದು ನಗರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಲಿದ್ದು ಕೊಡಿ ಸರ್ಕಲ್ ನಿಂದ ಬೈಕ್ ರ್ಯಾಲಿ ಮೂಲಕ ಸ್ವಾಗತಿಸಲಾಗುವುದು ಮತ್ತು ನಗರದ ಪ್ರಮುಖ ಮುಖ್ಯ ರಸ್ತೆಯಲ್ಲಿ ಸಮಾರಂಭ ನಡೆಯುವ ಕಂಚೇಘಟ್ಟ ರಸ್ತೆವರೆಗೆ ಜಿ.ಕೆ.ಬಾಬು ಲೇಔಟ್ ನಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿರುವ ವೇದಿಕೆಗೆ ಕರೆತರಲಾಗುವುದು ಎಂದರು.
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಒಂದಿಗೆ ಎನ್ ಡಿ ಎ ಅಭ್ಯರ್ಥಿ ಗಳು ರಾಜ್ಯದಲ್ಲಿ 140 ಸೀಟುಗಳನ್ನು ಗೆಲುವು ಸಾಧಿಸುವ ವಿಶ್ವಾಸವಿದೆಯೆಂದು ತಿಪಟೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಬಂದರೆ ಎನ್ ಡಿಎ ಅಭ್ಯರ್ಥಿಯಾಗಿ ನಾನು ಕಣಕ್ಕಿಳಿದು ಗೆದ್ದು ಬಲ ಎನ್ ಡಿ ಎ ಗೆತುಂಬುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಿವಸ್ವಾಮಿ ಕಂಚಘಟ್ಟ ಮುಖಂಡರಾದ ನಟರಾಜ್ ನಗರಾಧ್ಯಕ್ಷರಾಜು ಸಂತೋಷ್ ಮೋಹನ್ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


