nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾಧಿಕಾರಿ ನಡೆ ಉಗರಗೋಳ ಕಡೆ; ಬಾರ್ ಬಂದ್ ಮಾಡಿಸಿದ ಡಿಸಿ!
    ರಾಜ್ಯ ಸುದ್ದಿ November 20, 2022

    ಜಿಲ್ಲಾಧಿಕಾರಿ ನಡೆ ಉಗರಗೋಳ ಕಡೆ; ಬಾರ್ ಬಂದ್ ಮಾಡಿಸಿದ ಡಿಸಿ!

    By adminNovember 20, 2022No Comments3 Mins Read
    belagavi

    Provided by
    Provided by

    ಬೆಳಗಾವಿ : ಜನರ ಮನೆಬಾಗಿಲಿಗೆ ಆಡಳಿತವನ್ನು ಕೊಂಡೊಯ್ದು ಸ್ಥಳೀಯವಾಗಿ ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬ ಸರಕಾರದ ಆಶುದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು.

    ಬೆಳಿಗ್ಗೆ ಸವದತ್ತಿ ಯಲ್ಲಮ್ಮ ದೇವಿಯ ದರ್ಶನವನ್ನು ಪಡೆದುಕೊಂಡು ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಬಸವೇಶ್ವರ ವೃತ್ತದ ಬಳಿ ಗ್ರಾಮಸ್ಥರು ಪ್ರೀತಿಯಿಂದ ಬರಮಾಡಿಕೊಂಡರು.
    ಪೂರ್ಣಕುಂಭ ಹೊತ್ತ ಮಹಿಳೆಯರು ಹಾಗೂ ಡೊಳ್ಳಿನ ಮೇಳದವರು ಮೆರವಣ ಗೆಯ ಮೂಲಕ ಕಾರ್ಯಕ್ರಮದ ವೇದಿಕೆ ಇರುವ ರೇ.ಹ.ಹಳಮನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ಕರೆದುಕೊಂಡು ಹೋದರು.

    ಬಾರ್ ಗೆ ನುಗ್ಗಿ ಬಾಗಿಲು ಬಂದ್ ಮಾಡಿಸಿದ ಜಿಲ್ಲಾಧಿಕಾರಿ!:

    ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಕಾರಿನಿಂದಿಳಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲರು ನೇರವಾಗಿ ಪಕ್ದಲ್ಲೇ ಇರುವ ಆನಂದ ಬ್ರ್ಯಾಂಡಿ ಶಾಪ್ ಗೆ ತೆರಳಿ ಲೈಸೆನ್ಸ್, ಲಭ್ಯವಿರುವ ಮದ್ಯದ ಸಂಗ್ರಹ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ಕೈಗೊಂಡರು.

    ಜಿಲ್ಲಾಧಿಕಾರಿಗಳು ಬಸವೇಶ್ವರ ವೃತ್ತದಲ್ಲಿ ಇರುವ ಆನಂದ ಬ್ರ್ಯಾಂಡಿ ಅಂಗಡಿ ಮತ್ತು ಲಕ್ಷ್ಮೀ ಬಾರ್ ಮತ್ತು ರೆಸ್ಟೋರೆಂಟ್ ಗೆ ಸ್ವತಃ ತೆರಳಿ ಪರಿಶೀಲನೆ ಕೈಗೊಂಡರು.ಖುದ್ದಾಗಿ ಕೆಲವು ಮದ್ಯದ ಬಾಟಲ್ ಗಳನ್ನು ತೆಗೆದುಕೊಂಡು ಅವುಗಳ ಗುಣಮಟ್ಟ ಪರಿಶೀಲಿಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದರು.
    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆ ಆಗಮಿಸಿದ ನೂರಾರು ಮಹಿಳೆಯರು ಮತ್ತು ಗ್ರಾಮಸ್ಥರು ಗ್ರಾಮದಲ್ಲಿರುವ ಮದ್ಯ ಮಾರಾಟ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಆಗ್ರಹಿಸಿದರು.

    ಗ್ರಾಮಸ್ಥರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಸದ್ಯಕ್ಕೆ ಮದ್ಯದ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದ್ದು, ನಿಯಮಗಳ ಉಲ್ಲಂಘನೆಯ ಕುರಿತು ಕೂಲಂಕುಶವಾಗಿ ಪರಿಶೀಲನೆ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

    ಜಿಪಂ ಸಿಇಓ ದರ್ಶನ್, ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಮತ್ತಿತರರು ಉಪಸ್ಥಿತರಿದ್ದರು. ಪ್ರತಿ ತಿಂಗಳು ಮೂರನೇ ಶನಿವಾರ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಉದ್ಧೇಶವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
    ದೇವಿವನ ಸಾರ್ವಜನಿಕ ಪ್ರವೇಶಕ್ಕೆ ಮುಕ್ತ:

    ದೇವಿವನಕ್ಕೆ ಭೇಟಿ ನೀಡಿ ದೇವಿವನದ ಕೀಲಿಯನ್ನು ತೆಗೆದು ಸಾರ್ವಜನಿಕ ದರ್ಶನಕ್ಕೆ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ.ಗೃಹರಕ್ಷಕರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಮುಂಬರುವ ದಿನಗಳಲ್ಲಿ ದೇವಿವನದ ಬಳಿಯೂ ಮಳಿಗೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

    ಸವದತ್ತಿ ಯಲ್ಲಮ್ಮ ದೇವಸ್ಥಾನ ಆವರಣದಲ್ಲಿ ಇರುವ 250 ಮಳಿಗೆಗಳನ್ನು ಕೂಡ ಇಂದು ಹರಾಜು ಪ್ರಕ್ರಿಯೆ ಆರಂಭಿಸಲಾಗಿದೆ.

    ದೇವಸ್ಥಾನದ ಸಾವಿರ ಎಕರೆಯಲ್ಲಿ ಭಕ್ತಾಧಿಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಅವಕಾಶಗಳಿವೆ. ಅನಧಿಕೃತ ಅಂಗಡಿಗಳನ್ನು ಅಧಿಕೃತಗೊಳಿಸಿ ಹರಾಜು ಮಾಡಲಾಗುತ್ತಿದೆ. ಇದರಿಂದ ದೇವಸ್ಥಾನದ ಆದಾಯ ಹೆಚ್ಚಿಸುವುದರ ಜತೆಗೆ ಭಕ್ತಾಧಿಗಳಿಗೆ ಮೂಲಸೌಕರ್ಯ ಒದಗಿಸುವುದು ಸಾಧ್ಯವಾಗಲಿದೆ.ಈ ವ್ಯಾಪಾರ ಮಳಿಗೆಗಳನ್ನು ಉಗರಗೋಳ ಗ್ರಾಮದ ಜನರಿಗೂ ನೀಡಲಾಗುವುದು.
    ಹೋಮ್ ಸ್ಟೇ ಮಾಡಲು ಸಲಹೆ:

    ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಈ ಜನರಿಗೆ ಅಗತ್ಯ ವಸತಿ ಮತ್ತು ಊಟೋಪಹಾರ ಒದಗಿಸಲು ಅನುಕೂಲವಾಗುವಂತೆ ಉಗರಗೋಳ ಗ್ರಾಮಸ್ಥರು ಹೋಮ್ ಸ್ಟೇ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದರು.

    ಉಗರಗೋಳ ಗ್ರಾಮದ ಜನರು ಹೋಮ್ ಸ್ಟೇ ಮಾಡಲು ಅರ್ಜಿ ಸಲ್ಲಿಸಿದರೆ ಒಂದೇ ವಾರದಲ್ಲಿ ಹೋಮ್ ಸ್ಟೇ ಗ್ರಾಮದಲ್ಲಿ ಇರುವ ತಮ್ಮ ಮನೆಯ ಒಂದು ಭಾಗ ಅಥವಾ ತೋಟದ ಮನೆಗಳನ್ನು ಹೋಮ್ ಸ್ಟೇ ಗಳನ್ನಾಗಿ ಪರಿವರ್ತಿಸಿಕೊಂಡು ನಿರಂತರ ಆದಾಯ ಪಡೆದುಕೊಳ್ಳಬಹುದು.

    ಯಲ್ಲಮ್ಮ ದೇವಸ್ಥಾನಕ್ಕೆ ಆಗಮಿಸುವ ಲಕ್ಷಾಂತರ ಜನರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುವಂತೆ ಹೋಮ್ ಸ್ಟೇ ಉದ್ಯಮವನ್ನು ಪೆÇ್ರೀತ್ಸಾಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

    ಇದಾದ ಬಳಿಕ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾಧಿಕಾರಿಗಳು ಆಲಿಸಿದರು.ಉಗರಗೋಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರ್ಲಾಪುರ, ಯಲ್ಲಮ್ಮನಗುಡ್ಡ ಹಾಗೂ ತಾಂಡಾ ಬರುತ್ತವೆ.

    300 ಜನರಿಗೆ ನಿವೇಶನ ಒದಗಿಸಲು ಕ್ರಮ:

    ಉಗರಗೋಳ ಗ್ರಾಮದ ಒಟ್ಟು 299 ಜನರಿಗೆ ನಿವೇಶನ ಇಲ್ಲ; ಆದ್ದರಿಂದ ಇವರಿಗೆ ನಿವೇಶನ ಒದಗಿಸಲು ಗ್ರಾಮದ ಸಮೀಪದಲ್ಲಿ ಹತ್ತು ಎಕರೆ ಗುರುತಿಸಬೇಕು.

    ಗ್ರಾಮ ಪಂಚಾಯತಿಯಿಂದ ಜಮೀನು ಕೋರಿ ಠರಾವು ಪಾಸ್ ಕಳಿಸಿದರೆ ಆಶ್ರಯ ಯೋಜನೆಯಡಿ ಗ್ರಾಮಪಂಚಾಯಿತಿಗೆ ಹತ್ತು ಎಕರೆ ಜಮೀನು ಒದಗಿಸಬಹುದು.

    ಗ್ರಾಮದ ಜನರು ಎಲ್ಲರೂ ಸಂಘಟಿತರಾಗಿ ಈ ಪ್ರಯತ್ನ ಮಾಡಿದರೆ ಎಲ್ಲರಿಗೂ ನಿವೇಶನ ಸಿಗಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

    ಉಗರಗೋಳ, ಹರ್ಲಾಪುರ, ಯಲ್ಲಮ್ಮತಾಂಡಾ ಹೀಗೆ ಎಲ್ಲೆ ಸರಕಾರಿ ಜಮೀನು ಲಭ್ಯವಿದ್ದರೂ ಅದನ್ನು ಗುರುತಿಸಿ ನಿವೇಶನ ಒದಗಿಸಲಾಗುವುದು ಎಂದರು.

    ಎನ್.ಎ. ಹಾಗೂ ಕೆ.ಜೆ.ಪಿ. ಪಡೆಯದೇ ನಿವೇಶನಗಳನ್ನು ಮಾರಾಟ ಮಾಡಿರುವುದು ಕಂಡುಬಂದರೆ ಅಂತಹವರಿಗೆ ನೋಟಿಸ್ ನೀಡಿ, ಸದರಿ ಜಾಗೆಯನ್ನು ಸರಕಾರದ ವಶಕ್ಕೆ ಪಡೆಯುವ ಪ್ರಕ್ರಿಯೆ ಆರಂಭಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

    ಸರಕಾರಿ ಜಮೀನುಗಳಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡವರು 94 ಸಿ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅಂತಹ ಮನೆಗಳನ್ನು ಸಕ್ರಮಗೊಳಿಸಬಹುದು ಎಂದರು.

    ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಜುಬೇದಾ ಬೇಗಂ ಬಾರಿಗಿಡದ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ್, ಸಿಪಿಐ ಕರುಣೇಶ್ ಗೌಡ, ತಹಶೀಲ್ದಾರ ಜಕ್ಕನಗೌಡ್ರ ಮತ್ತಿತರರು ಉಪಸ್ಥಿತರಿದ್ದರು. ಗ್ರಾಮದ ನೂರಾರು ಜನರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.