ತುಮಕೂರು: ರಾಜ್ಯದ ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಸಹಾಯವಾಣಿ ಆರಂಭಿಸಲಾಗುವುದು. ನಿತ್ಯ 4 ಸಿಬ್ಬಂದಿ ಹಗಲು-ರಾತ್ರಿ ಎರಡು ಪಾಳಿಯಲ್ಲಿ ಕೆಲಸ ಮಾಡಲಿದ್ದಾರೆ. ರೋಗಿಗಳ ಕುಟುಂಬದವರು ಬಂದಾಗ ಅವರಿಗೆ ನೆರವು ನೀಡಲಾಗುತ್ತದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತುಮಕೂರಿನ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ ಸೆಕ್ಷನ್ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು.
ಸಿ ಸೆಕ್ಷನ್ ಪ್ರಮಾಣ 20-40% ಒಳಗೆ ಇರಬೇಕಾಗುತ್ತದೆ. ಇದರಲ್ಲಿ ಉದ್ದೇಶಪೂರ್ವಕ ಅಥವಾ ಭ್ರಷ್ಟಾಚಾರ ಇರಬಾರದು. ಇದಕ್ಕೆ ಕಡಿವಾಣ ಹಾಕಲಾಗುವುದು.
ಜಿಲ್ಲಾ ಸರ್ಜನ್, ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಪ್ರತಿ ಶುಕ್ರವಾರ ಸಭೆ ನಡೆಸಿ ಚರ್ಚಿಸಬೇಕು. ಲೋಪಗಳು ಕಂಡುಬಂದರೆ ಕೂಡಲೇ ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳು ಜಿಲ್ಲಾಸ್ಪತ್ರೆಯನ್ನು ಪರಿಶೀಲಿಸಬೇಕೆಂದು ಸೂಚಿಸಲಾಗಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy