ಗುಬ್ಬಿ: ತಾಲೂಕಿನ ಜಿಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೆರೆ ಗ್ರಾಮದ ಎ.ಕೆ.ಕಾಲೋನಿಯಲ್ಲಿ ಇರುವ ವಿದ್ಯುತ್ ಪರಿವರ್ತಕವನ್ನು ಬೇರೆಡೆಗೆ ವರ್ಗಾಯಿಸುವಂತೆ ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.
ಸುಮಾರು 15 ವರ್ಷಗಳಿಂದ ಬಹಳಷ್ಟು ಸಾರಿ ಈ ಬಗ್ಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಈ ಪರಿವರ್ತಕ ಜನ ವಸತಿ ಪ್ರದೇಶದಲ್ಲಿಯೇ ಇದ್ದು, ಇದಕ್ಕೆ ಯಾವುದೇ ತಡೆಗೋಡೆ ಇಲ್ಲ. ಇದೇ ಪ್ರದೇಶದಲ್ಲಿ ಸ್ಥಳೀಯ ಮಕ್ಕಳು ಆಟವಾಡುತ್ತಿರುತ್ತಾರೆ. ಜನರು ಇದೇ ಪ್ರದೇಶದಲ್ಲಿ ಸುತ್ತಾಡುತ್ತಿರುತ್ತಾರೆ. ನಾಳೆ ಯಾವುದಾದರೂ ಪ್ರಾಣ ಹಾನಿಯಾದರೆ ಯಾರು ಜವಾಬ್ದಾರಿ ಎಂದು ಇಲ್ಲಿನ ನಿವಾಸಿಗಳು ಪ್ರಶ್ನಿಸುತ್ತಿದ್ದಾರೆ.
ಈ ವಿದ್ಯುತ್ ಪರಿವರ್ತಕವನ್ನು ಬೇರೆಡೆಗೆ ವರ್ಗಾಯಿಸುವಂತೆ ಬೆಸ್ಕಾಮ್ ಅಧಿಕಾರಿಗಳಿಗೆ ಸುಮಾರು 15 ವರ್ಷಗಳಿಂದ ಬಹಳಷ್ಟು ಸಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಪರಿವರ್ತಕಕ್ಕೇ ಯಾವುದೇ ತಡೆಗೋಡೆ ಇಲ್ಲದೆ ಬಲಿಗಾಗಿ ಕಾಯುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಈ ಪರಿವರ್ತಕ ಬದಲಾಯಿಸದೆ ಇದ್ದರೆ, ಗ್ರಾಮಸ್ಥರ ಜೊತೆಗೂಡಿ ಬೆಸ್ಕಾಂ ಕಚೇರಿ ಮುಂದೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯ ಜೆ.ಎಂ.ನರಸಿಂಹಮೂರ್ತಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700