ಮುಸ್ಲಿಂ ಸಮುದಾಯದ ಕೈದಿಗಳಿಗೆ ಜಿಹಾದಿ ಬೋಧನೆ ಹಾಗೂ ಅನ್ಯಧರ್ಮೀಯರ ಮತಾಂತರಕ್ಕೆ ಯತ್ನ ಸೇರಿದಂತೆ ಅಕ್ರಮ ಚಟುವಟಿಕೆಗಳ ಆರೋಪ ಹಿನ್ನಲೆಯಲ್ಲಿ ಜೈಲಿನಲ್ಲಿರುವ ಶಂಕಿತ ಭಯೋತ್ಪಾದಕರ ಮೇಲಿನ ಕಣ್ಣಾವಲಿಗೆ ಅಧೀಕ್ಷಕರ (ಸೂಪರಿಂಟೆಂಡೆಂಟ್) ಸಾರಥ್ಯದಲ್ಲಿ ವಿಶೇಷ ತಂಡವನ್ನು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಮುಖ್ಯಸ್ಥರು ನೇಮಿಸಿದ್ದಾರೆ.
ಈ ಮೊದಲು ಶಂಕಿತ ಉಗ್ರರ ಬ್ಯಾರಕ್ ಗಳ ಮೇಲುಸ್ತುವಾರಿಯನ್ನು ಜೈಲರುಗಳು ಹಾಗೂ ಸಹಾಯಕ ಸೂಪರಿಂಟೆಂಡೆಂಟ್ ಗಳು ನಿರ್ವಹಿಸುತ್ತಿದ್ದರು.


