ತುಮಕೂರು: ನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನಗರದಲ್ಲಿ ನೀರು ಸರಬರಾಜು ಮಾಡುವ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿಯಲ್ಲಿ ಕಾಯಂಗೊಳಿಸುವಂತೆ ಒತ್ತಾಯಿಸಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ನೌಕರರು ಇಂದು ವಾಪಸ್ ಪಡೆದರು.
ಪಾಲಿಕೆ ಸದಸ್ಯರು ಇಂದು ತುರ್ತು ಸಭೆ ಕರೆದು ನೇರ ನೇಮಕಾತಿ ಅಡಿಯಲ್ಲಿ ನೌಕರರನ್ನು ಕಾಯಂಗೊಳಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ನೌಕರರು ತಮ್ಮ ಅನಿರ್ದಿಷ್ಟಾವಧಿ ಧರಣಿ ಮುಷ್ಕರವನ್ನು ವಾಪಸ್ ಪಡೆದರು .
ಈ ವೇಳೆ ಮಹಾನಗರ ಪಾಲಿಕೆಯ ಮೇಯರ್ ಕೃಷ್ಣಪ್ಪ ಪಾಲಿಕೆ ಆಯುಕ್ತ ರೇಣುಕಾ ಸೇರಿದಂತೆ ಪಾಲಿಕೆ ಸದಸ್ಯರು ಮಾತನಾಡಿದರು.
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5