ಸರಗೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಎಂದು ಕಾರ್ಯಕ್ರಮ ಮಾಡುತ್ತೀರಿ, ಆದರೆ, ಜಿಲ್ಲಾಧಿಕಾರಿಗಳೇ ಕಾರ್ಯಕ್ರಮದಲ್ಲಿ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಬದಲು ತಹಶೀಲ್ದಾರ್ ಬರುತ್ತಿದ್ದಾರೆ ಎಂದು ತಹಶೀಲ್ದಾರ್ ನ್ನು ಗ್ರಾಮಸ್ಥರು ತರಾಟೆಗೆತ್ತಿಕೊಂಡ ಘಟನೆ ಸರಗೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ಯ ಅವರಣದಲ್ಲಿನಡೆಯಿತು.
‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಲ್ಲಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳೇ ಬರಬೇಕು. ಒಂದೋ ಜಿಲ್ಲಾಧಿಕಾರಿಗಳನ್ನು ಕರೆಸಿ ಇಲ್ಲವಾದರೆ, ಕಾರ್ಯಕ್ರಮ ರದ್ದುಪಡಿಸಿ ಎಂದು ಗ್ರಾಮಸ್ಥರು ತಹಶೀಲ್ದಾರ್ ಅವರನ್ನು ತರಾಟೆಗೆತ್ತಿಕೊಂಡರು.
ಜಿಲ್ಲಾಧಿಕಾರಿಗಳು ಆಗಮಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದರು. ಈ ವೇಳೆ ತಹಶೀಲ್ದಾರ್ ಚಲುವರಾಜು ಅವರು ಪ್ರತಿಭಟನಾಕಾರರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದರೂ ಪ್ರತಿಭಟನಾಕಾರರು ಪಟ್ಟು ಹಿಡಿದು, ಜಿಲ್ಲಾಧಿಕಾರಿಗಳು ಬಾರದೇ ಕಾರ್ಯಕ್ರಮ ನಡೆಸುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಡಂಚಿನ ಭಾಗವಾಗಿರುವ ಈ ಗ್ರಾಮದಲ್ಲಿ ಕಾಡಾನೆ ಹಾವಳಿ ಜಾಸ್ತಿಯಾಗಿದೆ ಅರಣ್ಯ ಇಲಾಖೆ ಅಧಿಕಾರಿಗಳು ಜನರ ರಕ್ಷಣೆಗೂ ಮುಂದಾಗುತ್ತಿಲ್ಲ. ಇದರ ಜೊತೆಗೆ ನಷ್ಟ ಪರಿಹಾರವನ್ನು ನೀಡುತ್ತಿಲ್ಲ, ನಮ್ಮ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಗಳೇ ಬರಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದು, ಸಭೆಯಿಂದ ಹೊರ ನಡೆದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB