nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ
    ಜಿಲ್ಲಾ ಸುದ್ದಿ February 9, 2023

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    By adminFebruary 9, 2023No Comments2 Mins Read
    saraguru

    Provided by
    Provided by

    ಸರಗೂರು: ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್‌ ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುಷ್ಮಾ ಹೇಳಿದರು.

    ತಾಲೂಕಿನ ಬಿ ಮಟಕೆರಿ ಗ್ರಾಪಂಯ ವಿ ಎಸ್ ಎಸ್ ಎನ್ ಸಮುದಾಯ ಭವನದಲ್ಲಿ ಗುರುವಾರ ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆಯನ್ನು ತಾಲ್ಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ  ಮತ್ತು ಸರಕಾರದ ವಿವಿಧ ಇಲಾಖೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಜೀತ ಪದ್ಧತಿಯ ನಿರ್ಮೂಲನೆ ಮತ್ತು ಹೇಗೆ ಗುರುತಿಸುವುದು ಕುರಿತು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಾಗೂ ಉದ್ಘಾಟಿಸಿ ಮಾತನಾಡಿದರು.

    ಕನಿಷ್ಠ ಕೂಲಿ ಇಲ್ಲದೆ ಜೀತದಾಳುಗಳು ಮತ್ತು ಅವರ ಕುಟುಂಬಗಳು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತವೆ. ಆದರೆ ಅವರಿಗೆ ಶಿಕ್ಷಣದ ಕೊರತೆಯಿಂದ ಜೀತದಿಂದ ಹೊರಬಂದು ಸರಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇಂಥ ಪ್ರಕರಣಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದಲ್ಲಿ ಸರಕಾರದ ಸೌಲಭ್ಯ ಕಲ್ಪಿಸುವ ಮೂಲಕ ಜೀತ ಮುಕ್ತಗೊಳಿಸಬಹುದು. ಅನೇಕ ಸಾಮಾಜಿಕ ಅನಿಷ್ಠಗಳಂತೆ ಜೀತ ಪದ್ಧತಿಯೂ ಅನಿಷ್ಠ ಪದ್ಧತಿ. ಇದನ್ನು ಹೋಗಲಾಡಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

    ಜಿವಿಕಾ ತಾಲ್ಲೂಕು ಸಂಚಾಲಕ ಚಂದ್ರಶೇಖರ ಮೂರ್ತಿ  ಸಂಚಾಲಕ ಚಂದ್ರಶೇಖರ ಮೂರ್ತಿ  ಮಾತನಾಡಿ, ಈ ಅನಿಷ್ಠ ಪದ್ಧತಿ ನಿರ್ಮೂಲನೆಯ ಉದ್ದೇಶಕ್ಕಾಗಿ 1993 ರಲ್ಲಿ ಸರಕಾರೇತರ ಸಂಸ್ಥೆ ಆರಂಭಿಸಲಾಗಿದ್ದು, ಈ ಸಂಸ್ಥೆಯಲ್ಲಿ 650 ಕ್ಕೂ ಹೆಚ್ಚು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋಟೆ ಮತ್ತು ಸರಗೂರು ತಾಲ್ಲೂಕಿನಲ್ಲಿ ಈವರೆಗೆ ಒಟ್ಟು 560 ಜನರನ್ನು ಜೀತದಾಳುಗಳನ್ನು ಗುರುತಿಸಿ ಅವರನ್ನು ಜೀತದಿಂದ ವಿಮುಕ್ತಿಗೊಳಿಸಿದ್ದಿವಿ ಎಂದರು.


    Provided by
    Provided by

    ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಗ್ರಾಪಂ ಕುರ್ಣೆಗಾಲ ಬೆಟ್ಞಸ್ವಾಮಿ ಮಾತನಾಡಿ, ಕರ್ನಾಟಕದಲ್ಲಿ ಜೀತ ಪ್ರಕರಣಗಳು ಸಾಕಷ್ಟಿದ್ದರೂ ಪ್ರಕರಣಗಳು ಮಾತ್ರ ಬೆಳಕಿಗೆ ಬರುತ್ತಿಲ್ಲ. ಈ ಕಾರಣದಿಂದಲೇ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಇಲಾಖೆ, ಪಂಚಾಯತ್ ರಾಜ ಇಲಾಖೆ, ಸಮಾಜ ಕಲ್ಯಾಣ ಮತ್ತು ಮಹಿಳಾ ಮತ್ತು ಕಲ್ಯಾಣ ಇಲಾಖೆಗಳ ನೌಕರರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

    ,ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಶಿವಣ್ಣ, ಜಿವಿಕಾ ಮಹೇಶ್, ಗ್ರಾಪಂ ಅಧ್ಯಕ್ಷೆ ರೂಪಾಬಾಯಿ, ಗ್ರಾಪಂ ಉಪಾಧ್ಯಕ್ಷ ದೇವದಾಸ್, ಗ್ರೇಟ್ 2 ತಹಸೀಲ್ದಾರ್ ಪರಶಿವಮೂರ್ತಿ, ಪರಿಶಿಷ್ಟ ಪಂಗಡ ಇಲಾಖೆ ಅಧಿಕಾರಿ ನಾರಾಯಣಸ್ವಾಮಿ,ಗೋಪಾಲಕೃಷ್ಣ ಮೂರ್ತಿ, ತೋಟಗಾರಿಕೆ ಇಲಾಖೆ ಅಧಿಕಾರಿ ಗೋವಿಂದರಾಜು, ರಾಣಿಬಾಯಿ, ಕಾಳಸ್ವಾಮಿ, ತಾಲ್ಲೂಕು ಪಂಚಾಯಿತಿ ಸಂಯೋಜಕ ಮಹದೇವಸ್ವಾಮಿ, ದಸಂಸ ತಾಲ್ಲೂಕು ಸಂಚಾಲಕ ಗೋವಿಂದರಾಜು, ಮಹೇಶ್ ಎಲ್ಲಾ ಗ್ರಾಪಂ ಪಿಡಿಒ ಅಧಿಕಾರಿಗಳು ಭಾಗ್ಯ, ಹನುಮಯ್ಯ, ನಾಗೇಂದ್ರ, ಚೆನ್ನಪ್ಪ,ಸರಿತಾ, ಮಹೇಶ್, ಪ್ರಸನ್ನ, ಮಲ್ಲರಾಜು, ಅರುಣ್, ಚಂದ್ರ, ಕಾಂತರಾಜು, ಅಭಿಲಾಷ್, ವಾಲ್ಮೀಕಿ ನಿಗಮ ಇಲಾಖೆ ಅಧಿಕಾರಿ ಪರಮೇಶ್ವರಪ್ಪ ಎಲ್ಲಾ ಗ್ರಾಪಂ ನೌಕರರು ಕಾರ್ಯಕ್ರಮದಲ್ಲಿ ಮುಖಂಡರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ತುಮಕೂರು: ಆಧುನಿಕ ಸಮಾಜದಲ್ಲೂ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಗರದ ಕೆಇಬಿ (KEB) ಇಂಜಿನಿಯರ್ಸ್…

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.