ಅರ್ಜೆಂಟೀನಾ ನಾಯಕ ಲಿಯೋನೆಲ್ ಮೆಸ್ಸಿ ತಮ್ಮ ಜೀವನದ ದೊಡ್ಡ ಕನಸು ಈ ವರ್ಷ ನನಸಾಗಿದೆ ಎಂದು ಹೇಳಿದ್ದಾರೆ. ಜಗತ್ತಿನಾದ್ಯಂತ ಇರುವ ತಮ್ಮ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದರು. ಅಲ್ಲದೇ ತನಗೆ ಬೆಂಬಲ ನೀಡಿದ ಕುಟುಂಬದವರು ಹಾಗೂ ಸ್ನೇಹಿತರಿಗೆ ಧನ್ಯವಾದ ಹೇಳುತ್ತೇನೆ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಮೆಸ್ಸಿ ತಮ್ಮ ಕುಟುಂಬದೊಂದಿಗೆ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಅದೊಂದು ಅವಿಸ್ಮರಣೀಯ ವರ್ಷ. 2022 ಕನಸು ನನಸಾದ ವರ್ಷ. ನಾನು ಅದನ್ನು ನನ್ನ ಕುಟುಂಬದೊಂದಿಗೆ ಕಳೆಯದಿದ್ದರೆ ಅದು ಮೌಲ್ಯಯುತವಾಗುತ್ತಿರಲಿಲ್ಲ.
ಈ ಹಂತದಲ್ಲಿ ನಾನು ಮತ್ತು ನನ್ನ ಕುಟುಂಬವನ್ನು ಯಾವಾಗಲೂ ಬೆಂಬಲಿಸಿದ ನನ್ನ ಎಲ್ಲಾ ಸ್ನೇಹಿತರನ್ನು ನಾನು ನೆನಪಿಸಿಕೊಳ್ಳುತ್ತೇನೆ ಮತ್ತು ನಾನು ಬಿದ್ದಾಗಲೆಲ್ಲಾ ಮತ್ತೆ ಎದ್ದೇಳಲು ನನ್ನನ್ನು ಪ್ರೋತ್ಸಾಹಿಸುತ್ತೇನೆ. ನನಗೆ ಹಲವು ದೇಶಗಳ ಜನರ ಪ್ರೀತಿ ಸಿಕ್ಕಿದೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು’ – ಮೆಸ್ಸಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


