ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ವಿಬಿ-ಜಿ ರಾಮ್ ಜಿ’ (VB–G RAM G) ಯೋಜನೆಯಡಿ ಆಯೋಜಿಸಲಾಗಿದ್ದ ವಿಶೇಷ ಜಾಬ್ ಕಾರ್ಡ್ ಮೇಳಕ್ಕೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಅವರು ಅಧಿಕೃತವಾಗಿ ಚಾಲನೆ ನೀಡಿದರು.
ಗ್ರಾಮೀಣ ಪ್ರದೇಶದ ಅರ್ಹ ಕೂಲಿಕಾರ್ಮಿಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಮತ್ತು ಹೊಸದಾಗಿ ಜಾಬ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವುದು ಇದರ ಉದ್ದೇಶವಾಗಿದೆ.
ಈಗಾಗಲೇ ಇರುವ ಜಾಬ್ ಕಾರ್ಡ್ಗಳ ಪರಿಶೀಲನೆ ಹಾಗೂ ಹೊಸದಾಗಿ ಉದ್ಯೋಗದ ಬೇಡಿಕೆ ಸಲ್ಲಿಸುವ ಕುರಿತು ಗ್ರಾಮಸ್ಥರಿಗೆ ಸಮಗ್ರ ಮಾಹಿತಿ ನೀಡಲಾಯಿತು.
ವಿಬಿ–ಜಿ ರಾಮ್ ಜಿ ಯೋಜನೆಯಡಿ ಒಟ್ಟು 318 ವಿವಿಧ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದ್ದು, ಕೂಲಿಕಾರ್ಮಿಕರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಯಿತು.
ಯೋಜನೆಯಡಿ ದಿನಗೂಲಿಯನ್ನು ರೂ. 370 ರಿಂದ ರೂ. 382 ಕ್ಕೆ ಏರಿಕೆ ಮಾಡಲಾಗಿದೆ. ವಾರ್ಷಿಕ ಮಾನವ ದಿನಗಳ ಮಿತಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ಒಂದು ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಮೂಲಕ ವಾರ್ಷಿಕವಾಗಿ ರೂ. 47,750 ರವರೆಗೆ ಕೂಲಿ ಪಡೆಯುವ ಸುವರ್ಣ ಅವಕಾಶ ಕಲ್ಪಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರಣಪ್ಪ ಗಾದಗೆ, ಡಿಇಒ ದತ್ತು ಭೋಸ್ಲೆ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಕಾರ್ಯದರ್ಶಿ ರಜನೀಶ್, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
