ಮಂಡ್ಯ: ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಪಾಲಕರನ್ನು ಕಳೆದುಕೊಂಡು ಅನಾಥಳಾಗಿದ್ದ ಯುವತಿಗೆ “ಮಂಡ್ಯ ಟೂ ಇಂಡಿಯಾ’ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗ ಲಭಿಸಿದೆ.
ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಉದ್ಯೋಗ ನೇಮಕಾತಿ ಪತ್ರ ವಿತರಿಸಿದರು.
ಜು. 16ರಂದು ಸಂಭವಿಸಿದ ಶಿರೂರು ಗುಡ್ಡ ಕುಸಿತದಲ್ಲಿ ಮೃತರಾದ ಜನಾರ್ದನ್ ನಾಯ್ಕ ಪುತ್ರಿ ಕೃತ್ತಿಕಾ ಜೆ.ನಾಯ್ಕಗೆ ಕೇಂದ್ರ ಸರಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪೆನಿ (ಬಿಎಚ್ ಇಲ್)ಯಲ್ಲಿ ಉದ್ಯೋಗ ದೊರೆತಿದೆ.
ಈ ಹಿಂದೆ ದುರಂತ ಸ್ಥಳಕ್ಕೆ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾಗ ಕೃತ್ತಿಕಾಗೆ ಉದ್ಯೋಗ ನೀಡುವ ಭರವಸೆ ನೀಡಿದ್ದರು. 6,150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ. ಉಳಿದವರಿಗೂ ಡಿಸೆಂಬರ್ ವೇಳೆಗೆ ಉದ್ಯೋಗ ಕೊಡಿಸಲಾಗುವುದು ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296