ಯಾದಗಿರಿ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ ವಿವಿಧ ದರ್ಜೆಯ 24 ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿರುವ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 24 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ 9 ಪ್ರೊಸೆಸ್ ಸರ್ವರ್, 5 ಪ್ಯೂನ್, 5 ಟೈಪಿಸ್ಟ್ ಹಾಗೂ 4 ಟೈಪಿಸ್ಟ್–ಕಾಪಿಸ್ಟ್ ಹುದ್ದೆಗಳು ಸೇರಿವೆ.
ಟೈಪಿಸ್ಟ್ ಹಾಗೂ ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 31,775 ರಿಂದ 67,600 ರೂ. ವರೆಗೆ ವೇತನ ಸಿಗಲಿದೆ. ಜವಾನ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 27,000 ರಿಂದ 46,675 ರೂ. ವರೆಗೆ ವೇತನ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ 12ನೇ ತರಗತಿ ಉತ್ತೀರ್ಣರಾಗಿರಬೇಕು. ಸೆಪ್ಟೆಂಬರ್ 30, 2026 ರಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಸರ್ಕಾರದ ನಿಯಮಾವಳಿಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ., ಇತರೆ ಮೀಸಲು ವರ್ಗದ ಅಭ್ಯರ್ಥಿಗಳಿಗೆ 100 ರೂ. ಹಾಗೂ ಎಸ್ ಸಿ, ಎಸ್ ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 50 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 30, 2026 ರೊಳಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ yadgir.dcourts.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
