ಹಾವೇರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಲೈಬ್ರರಿ ಸೂಪರ್ ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹಾವೇರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಹಾವೇರಿ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಹಾವೇರಿ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 31, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
PWD ಅಭ್ಯರ್ಥಿಗಳು: ರೂ.100/-
SC/ST/ಪ್ರವರ್ಗ-I/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.200/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಚಲನ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA