ಬೀದರ್: ನಗರದ ಜಾನಸನ್ ಘೋಡೆ ಅವರನ್ನು ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಜಂಟಿ ಸಂಯೋಜಕರಾಗಿ ನೇಮಕ ಮಾಡಲಾಗಿದೆ.
ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸುಖ್ ಪಾಲ್ ಸಿಂಗ್ ಖೈರಾ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಜಾನಸನ್ ಘೋಡೆ ಎರಡು ದಶಕದಿಂದ ಕಾಂಗ್ರೆಸ್ ನಲ್ಲಿದ್ದಾರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಕಾಂಗ್ರೆಸ್ ಬೀದರ್ ನಗರ ಯುವ ಘಟಕದ ಉಪಾಧ್ಯಕ್ಷ ರಾಜ್ಯ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಸೇರಿ ಪಕ್ಷದ ವಿವಿಧ ಹುದ್ದೆಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಪಕ್ಷ ನಿಷ್ಠೆಗೆ ಈಗ ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ಹುದ್ದೆ ಒಲಿದಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


