ಬೀದರ್: ಶ್ರೀಶೈಲಂನ ಅಕ್ಕ ಮಹಾದೇವಿ ಚೈತನ್ಯ ಪೀಠದಲ್ಲಿ ಜಿಲ್ಲೆಯವರೇ ಆದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಜಾನಸನ್ ಘೋಡೆ ಅವರನ್ನು ಪೀಠದ ಅಧಿಪತಿ ಮಾತೆ ಕರುಣಾದೇವಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.
ಈ ವೇಳೆ ಜಾನಸನ್ ಘೋಡೆ ಅವರ ಸಾಮಾಜಿಕ ಕಾರ್ಯಗಳನ್ನು ಅವರು ವಿಶೇಷವಾಗಿ ಶ್ಲಾಘಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಜಾನಸನ್ ಘೋಡೆ ಅವರು ಜ್ಯೋತಿರ್ಲಿಂಗದ ದರ್ಶನ ಪಡೆದು ಧನ್ಯತಾ ಭಾವ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಬೇಮಳಖೇಡ ಮಠದ ಪೀಠಾಧಿಪತಿ ಡಾ.ರಾಜಶೇಖರ ಶಿವಾಚಾರ್ಯ, ಔರಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಯುವ ಉದ್ಯಮಿ ಸಂಗಮೇಶ ಪಟೇಲ್ ಹಾಗೂ ಪ್ರಮುಖ ಮುಖಂಡರಾದ ಧಮ್ಮದೀಪ, ವಿಕಾಸ ನಾಸಿಗಾರ್, ರಾಕೇಶ್ ದಂಡೆ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
