nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ

    November 16, 2026

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!

    November 16, 2026
    Facebook Twitter Instagram
    ಟ್ರೆಂಡಿಂಗ್
    • ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    • ತಿಪಟೂರು: ಹಾಲ್ಕುರಿಕೆ ರಸ್ತೆ ಭಾಗದಲ್ಲಿ ನ.16ರಿಂದ ಡಿ.5ರವರೆಗೆ ವಿದ್ಯುತ್ ವ್ಯತ್ಯಯ
    • ಚಳಿಗಾಲದಲ್ಲಿ ಪದೇ ಪದೇ ಹಸಿವಾಗುವುದೇಕೆ? ಸಿಹಿ, ಖಾರ ತಿನ್ನುವ ಬಯಕೆಯ ಹಿಂದಿದೆ ಈ ಕಾರಣಗಳು!
    • ಬೀದರ್ ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ಕೆಜಿಗೂ ಅಧಿಕ ಗಾಂಜಾ ವಶ, ಓರ್ವ ಆರೋಪಿ ಬಂಧನ
    • ಕೆಕೆಆರ್ ಟಿಸಿ ನಿರ್ದೇಶಕ ಸ್ಥಾನಕ್ಕೆ ಚಂದ್ರಕಾಂತ ಹಿಪ್ಪಳಗಾಂವ ರಾಜೀನಾಮೆ ಘೋಷಣೆ
    • ಬಾಕಿ ಸಂಬಳ ಕೇಳಿದ್ದಕ್ಕೆ ಚಾಲಕನ ಅಪಹರಣ, ಮಾರಣಾಂತಿಕ ಹಲ್ಲೆ: ಮಾಲೀಕ ಸೇರಿ ಮೂವರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜರ್ನೋತ್ಸವ–2026: “ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ”
    ತುಮಕೂರು October 19, 2026

    ಜರ್ನೋತ್ಸವ–2026: “ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ”

    By Ganesh TumkuruOctober 19, 2026No Comments2 Mins Read
    journalism

    ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ, ಓದು ಮತ್ತು ಅಭ್ಯಾಸದ ಮೂಲಕ ಭಾಷೆ ಹಾಗೂ ಬರವಣಿಗೆಯ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬಹುದು ಎಂದು ಪತ್ರಕರ್ತೆ ಹಾಗೂ ತುಮಕೂರು ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿನಿ ಕಾವ್ಯ ಎನ್. ಅವರು ಅಭಿಪ್ರಾಯಪಟ್ಟರು.

    ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಆ. 17ರ ಶನಿವಾರ ಆಯೋಜಿಸಿದ್ದ ಜರ್ನೋತ್ಸವ–2026 ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಪತ್ರಿಕೋದ್ಯಮದಲ್ಲಿ ಭಾಷೆಯ ಮೇಲಿನ ಹಿಡಿತ ಮಹತ್ವದ ಪಾತ್ರ ವಹಿಸುತ್ತದೆ. ವಿಷಯವನ್ನು ಸ್ಪಷ್ಟವಾಗಿ, ಸರಳವಾಗಿ ಮತ್ತು ಪರಿಣಾಮಕಾರಿಯಾಗಿ ಅಭಿವ್ಯಕ್ತಿಸುವ ಸಾಮರ್ಥ್ಯ ಬೆಳೆಸಿಕೊಂಡಾಗ ಮಾತ್ರ ಓದುಗರ ಗಮನ ಸೆಳೆಯಲು ಸಾಧ್ಯ. ಇದಕ್ಕಾಗಿ ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ದಿನಪತ್ರಿಕೆಗಳು, ನಿಯತಕಾಲಿಕೆಗಳು ಹಾಗೂ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ನಿರಂತರವಾಗಿ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದರು.

    ಪತ್ರಿಕೋದ್ಯಮ ವಿದ್ಯಾರ್ಥಿಗಳು ತರಗತಿಯ ಪಾಠಗಳ ಜೊತೆಗೆ ಪ್ರಾಯೋಗಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ವರದಿಗಾರಿಕೆ, ಸುದ್ದಿ ಬರವಣಿಗೆ, ಸಂದರ್ಶನ, ಸಂಪಾದನೆ ಹಾಗೂ ವಿವಿಧ ಕಾರ್ಯಚಟುವಟಿಕೆಗಳನ್ನು ಕಲಿಯುವ ಮೂಲಕ ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ನಿರಂತರ ಕಲಿಕೆ ಮತ್ತು ಪರಿಶ್ರಮವು ಭವಿಷ್ಯದಲ್ಲಿ ಉತ್ತಮ ಪತ್ರಕರ್ತರಾಗಿ ರೂಪುಗೊಳ್ಳಲು ನೆರವಾಗುತ್ತದೆ ಎಂದು ಹೇಳಿದರು.

    ವಿಭಾಗದ ಅಧ್ಯಕ್ಷರಾದ ಡಾ.ಸಿಬಂತಿ ಪದ್ಮನಾಭ ಕೆ.ವಿ. ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಎತ್ತರಕ್ಕೆ ಏರಿದಾಗ ಗುರುಗಳಿಗೆ ಆಗುವ ಸಂತೋಷಕ್ಕೆ ಮತ್ತೊಂದೂ ಸಾಟಿಯಿಲ್ಲ. ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಯಶಸ್ಸನ್ನು ಬಯಸುವವರೇ ನಿಜವಾದ ಗುರುಗಳು. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಂಡು, ಸ್ಪಷ್ಟವಾದ ಗುರಿಯನ್ನು ಹೊಂದಿರಬೇಕು ಎಂದು ಹೇಳಿದರು.

    ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ವಿಭಾಗದ ಉಪನ್ಯಾಸಕರಾದ ಡಾ. ಪೃಥ್ವಿರಾಜ್ ಟಿ., ಡಾ. ಸುಲೋಚನ ಜಿ.ಎಸ್., ವಿಷ್ಣುಧರನ್ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ

    November 16, 2026

    ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ

    November 15, 2026

    ತುಮಕೂರಿನಲ್ಲಿ 7 ಕೋಟಿ ರೂ. ವೆಚ್ಚದ ಬೃಹತ್ ಎಲ್ ‌ಇಡಿ ಪರದೆ ಲೋಕಾರ್ಪಣೆ: ದೇಶದ ಜಿಲ್ಲಾ ಕೇಂದ್ರಗಳಲ್ಲೇ ಇದು ಮೊದಲು ಎಂದ ಡಿಸಿಎಂ ಪರಮೇಶ್ವರ್

    November 15, 2026

    Leave A Reply Cancel Reply

    Our Picks

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026

    ಡಬ್ಬಿಂಗ್ ಲೋಕದಲ್ಲಿ ಹೊಸ ಕ್ರಾಂತಿ; ‘ರಾಮಾಯಣ’ ಚಿತ್ರದಲ್ಲಿ ಬ್ರಹ್ಮ ಎಐ ಮ್ಯಾಜಿಕ್! ಏನಿದರ ವಿಶೇಷತೆ ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ

    November 16, 2026

    ತುಮಕೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ U-14, U–17 ಹಾಗೂ U–19 ವಿಭಾಗಗಳ ರೈಫಲ್ ಶೂಟಿಂಗ್…

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!

    November 16, 2026

    ತಿಪಟೂರು: ಹಾಲ್ಕುರಿಕೆ ರಸ್ತೆ ಭಾಗದಲ್ಲಿ ನ.16ರಿಂದ ಡಿ.5ರವರೆಗೆ ವಿದ್ಯುತ್ ವ್ಯತ್ಯಯ

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.