ಪಾವಗಡ: ಪತ್ರಕರ್ತನ ಮೇಲೆ ಮೂವರು ಮಹಿಳೆಯರು ಸೇರಿಕೊಂಡು ಸಾರ್ವಜನಿಕ ಸ್ಥಳದಲ್ಲೇ ಚಪ್ಪಲಿಯಲ್ಲಿ ಮಾರಕ ದಾಳಿ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸೆಂಬರ್ 16ರಂದು ನಾರಾಯಣ ರೆಡ್ಡಿ ಎಂಬಾತನ ಅಕ್ರಮ ಸಂಬಂಧದ ಕುರಿತು ವರದಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಪಟ್ಟಣದ ಹೃದಯ ಭಾಗದ ಟೋಲ್ ಗೇಟ್ ಬಳಿ ನಾರಾಯಣ ರೆಡ್ಡಿ ಕುಟುಂಬದ ಮಹಿಳಾ ಸದಸ್ಯರು ಮೂರು ಜನ ಸೇರಿ ಪತ್ರಕರ್ತ ರಾಮಾಂಜಿನಪ್ಪನವರ ಮೇಲೆ ಅಂಬೇಡ್ಕರ್ ವೃತ್ತದಲ್ಲಿ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪತ್ರಕರ್ತನ ಮೇಲಿನ ದಾಳಿ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.
ಈ ಹಲ್ಲೆಗೆ ಪತ್ರಕರ್ತರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಪತ್ರಕರ್ತರಿಗೆ ರಕ್ಷಣೆ ನೀಡುವಂತೆ ಪತ್ರಕರ್ತರು ಒತ್ತಾಯಿಸಿದ್ದಾರೆ. ಈ ಘಟನೆ ಮಾಧ್ಯಮ ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx