ಬಿಹಾರದಲ್ಲಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ. ಅರಾರಿಯಾ ಜಿಲ್ಲೆಯಲ್ಲಿ ನೆನ್ನೆ ಬೆಳಗ್ಗೆ ಈ ಘಟನೆ ನಡೆದಿದೆ. ಪತ್ರಕರ್ತರ ಮನೆಗೆ ನುಗ್ಗಿದ ನಾಲ್ವರ ತಂಡ ಗುಂಡಿನ ದಾಳಿ ನಡೆಸಿದೆ.
ರಾಣಿಗಂಜ್ ಮೂಲದ ವಿಮಲ್ ಕುಮಾರ್ ಯಾದವ್ ಕೊಲೆಯಾದವರು. ಅಪರಿಚಿತ ದುಷ್ಕರ್ಮಿಗಳು ಮನೆಗೆ ನುಗ್ಗಿ ಯಾದವ್ ಅವರ ಎದೆಗೆ ಗುಂಡು ಹಾರಿಸಿದ್ದಾರೆ. ಪತ್ರಕರ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅರಾರಿಯಾ ಮರಣೋತ್ತರ ಪರೀಕ್ಷೆ ಮೈದಾನದಲ್ಲೂ ಗದ್ದಲ ಉಂಟಾಯಿತು. ಸದ್ಯ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಸ್ ಪಿ ಹಿಡಿದು ಸ್ಥಳೀಯ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿದರು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.


