nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಸಂಘ: ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    ಜಿಲ್ಲಾ ಸುದ್ದಿ January 6, 2026

    ಪತ್ರಕರ್ತರ ಸಂಘ: ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    By adminJanuary 6, 2026No Comments2 Mins Read
    journalists

    ಹೆಚ್.ಡಿ.ಕೋಟೆ:  ನೂತನ ಪತ್ರಕರ್ತ ಪದಾಧಿಕಾರಿಗಳ ಅಧಿಕಾರದ ಗದ್ದುಗೆಯನ್ನು ನಿಮ್ಮದೇ ಅಧಿಪತ್ಯದಲ್ಲಿ ಸೇವಾ ಕ್ಷೇತ್ರದೊಂದಿಗೆ ಅಧಿಕಾರವನ್ನು ತಾಳ್ಮೆಯಿಂದ ಮಾನಸಿಕ ಸಿದ್ಧತೆಯೊಂದಿಗೆ ಪ್ರತಿಷ್ಠೆಗಳ ಸೋಂಕಿಲ್ಲದೆ ಗೌರವದಿಂದ ಮುನ್ನಡೆಸುವಂತೆ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ನೂತನ ಸಾಲಿನ ಪದಾಧಿಕಾರಿಗಳಿಗೆ ಹಿತವಚನ ನೀಡಿದರು.

    ಸಂಘ ಸಂಸ್ಥೆಗಳಲ್ಲಿ ಸದಸ್ಯರೇ ಎಲ್ಲ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಿಲ್ಲದ ಕಾರಣ ಅದೇ ಪರಿಕಲ್ಪನೆಯಲ್ಲಿ ಸ್ಥಳೀಯ ಪತ್ರಕರ್ತರ ಸಂಘದ ಪದಾಧಿಕಾರಿಗಳನ್ನು ನೂತನವಾಗಿ ನೇಮಕ ಮಾಡಲಾಗಿದ್ದು, ಕುಟುಂಬದಲ್ಲಿನ ತಂದೆ ತಾಯಿಗಳಂತೆ ಸ್ಥಾನಗಳನ್ನು ಗೌರವಿಸಬೇಕಿದೆ ಎಂದು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ತಿಳಿಸಿದರು.

    ಸ್ಥಳೀಯ ತಾಲೂಕು ಪತ್ರಕರ್ತರ ಸಂಘದ 2026ರಿಂದ2028 ರ ವರೆಗಿನ ಎರಡು ವರ್ಷಗಳ ಅವಧಿಗೆ ನಡೆಸಲಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷರಾಗಿ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಹಿರಿಯರನ್ನು ಗೌರವಿಸುತ್ತಾ ಸರ್ವ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಸೇವಾ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಬೇಕಿದ್ದು, ಪತ್ರಕರ್ತರ ಭವನದ ನಿವೇಶನಕ್ಕೆ ಶ್ರಮಿಸುವಂತೆ ಹಾಗೂ ಈ ಸಂಬಂಧ ನಾವು ಕೂಡ ನಿಮ್ಮೊಂದಿಗೆ ಸಹಕರಿಸುವುದಾಗಿ ತಿಳಿಸಿದ ಅವರು, ಕಳೆದ ಸಾಲಿನಲ್ಲಿ 64,000 ಗಳಿಂದ ಒಂದು ಲಕ್ಷ ರೂ.ಗಳ ಗಡಿ ದಾಟಿರುವ ಉಳಿತಾಯದ ಮೊತ್ತಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು, ರಾಜಕಾರಣಿಗಳು ಪತ್ರಕರ್ತರನ್ನು ನಿಂದಿಸಿದಲ್ಲಿ ಖಂಡಿಸುವ ಕ್ರಮಕ್ಕೆ ಮುಂದಾಗುವಂತೆ ಹಾಗೂ ಆತ್ಮವಿಮರ್ಶೆಗೆ ಸಲ್ಲದ ಸ್ವಾಭಿಮಾನಕ್ಕೆ ತಲೆಬಾಗದಿರಿ ಎಂದರು.

    ತಾಲೂಕು ಸಂಘಗಳು ಜಿಲ್ಲಾ ಸಂಘದ ಅಂಗ ಸಂಸ್ಥೆಯಾಗಿದ್ದು, ಜಿಲ್ಲಾ ಪತ್ರಕರ್ತರ ಸಂಘ ಸರ್ವಾಧಿಕಾರಿಯಾಗಿ ನಡೆಯದೆ, ಪತ್ರಿಕಾ ಕ್ಷೇತ್ರಗಳ ವೃತ್ತಿಯ ಸ್ವರೂಪ ಬದಲಾದಂತೆ ಹೊಸ ಹೊಸ ಸವಾಲುಗಳ ನಡುನಡುವೆಯೂ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಅವರ ಸುಖ, ದುಃಖ, ಸಾವು, ನೋವು, ಇವೆಲ್ಲವುಗಳಿಗೂ ಕೊಡುಗೆಯ ರೂಪದಲ್ಲಿ ಹಿಂದಿನಿಂದಲೂ ನೀಡುತ್ತಲೇ ಬರುತ್ತಿದ್ದು ಇದೀಗ ಹೆಚ್ಚಿನ ರೂಪದಲ್ಲಿ ನಡೆಯುತ್ತಿದ್ದು ಗ್ರಾಮೀಣ ಮಟ್ಟದ ನಿಮ್ಮೆಲ್ಲರ ಅಧಿಕಾರವನ್ನು ಸೇವಾ ಕ್ಷೇತ್ರಗಳೊಂದಿಗೆ ಬೆಳಗಿಸುವಂತೆ ಕೆ. ದೀಪಕ್ ಕರೆ ನೀಡಿದರು.

    ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ  ನಾರಾಯಣ ಮಾತನಾಡಿ, ಪತ್ರಕರ್ತರ ಜಾತಿ ನಮ್ಮದು ನಮ್ಮಲ್ಲಿ ತಾರತಮ್ಯ ಸಲ್ಲದು ಸೇವೆಗಳಿಗೆ ಆದ್ಯತೆ ನೀಡಿ ಸಂಘದ ಅಭ್ಯುದಯಕ್ಕೆ ಕಾರಣರಾಗಿರಿ ಎಂದರು.

    ಸಮಾರಂಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಚುನಾವಣಾ ಅಧಿಕಾರಿಯಾಗಿದ್ದ ಹಿರಿಯ ಪತ್ರಕರ್ತ ಕಾಶಿನಾಥ್ ಹುಣಸೂರಿನ ಹನಗೋಡು ನಟರಾಜ್  ಪದಾಧಿಕಾರಿಗಳಾದ ಅಧ್ಯಕ್ಷ ನಾಗರಾಂ, ಉಪಾಧ್ಯಕ್ಷ ದೊಡ್ಡ ಸಿದ್ದಯ್ಯ, ಪ್ರಧಾನ ಕಾರ್ಯದರ್ಶಿ ನಿಂಗಣ್ಣ, ಕಾರ್ಯದರ್ಶಿ ದಾಸೇಗೌಡ, ಖಜಾಂಚಿ ಜಿ.ರವಿಕುಮಾರ್, ನಿಕಟಪೂರ್ವ ಅಧ್ಯಕ್ಷ ಮಂಜುನಾಥ್, ಖಜಾಂಚಿ ಮಂಜುಕೋಟೆ, ನಿರ್ದೇಶಕರುಗಳಾದ ಸುರೇಶ್,ಚಂದ್ರ, ಪುಟ್ಟರಾಜು, ಹಂಪಾಪುರನಾಗೇಶ, ವಾಸುಕಿನಾಗೇಶ್, ಶರವಣ,ಸದಸ್ಯರುಗಳಾದ ಸಿ.ಎನ್. ರಘು, ಆನಂದ್, ಶ್ರೀನಿಧಿ ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.