nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
    ಜಿಲ್ಲಾ ಸುದ್ದಿ July 30, 2026

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    By Ganesh TumkuruJuly 30, 2026No Comments2 Mins Read
    bidar

    ಔರಾದ್: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವರು ಹಾಗೂ ಔರಾದ್ ಶಾಸಕರಾದ ಪ್ರಭು ಚವ್ಹಾಣ ಕರೆ ನೀಡಿದರು.

    ಔರಾದ್ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ‘ಕನ್ನಡ ಜಂಗಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಜನರ ಕುಂದುಕೊರತೆಗಳು, ಶಿಕ್ಷಣ, ನೀರಾವರಿ, ಕೃಷಿ ಹಾಗೂ ಕಾರ್ಮಿಕರ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಕೆಲಸ ಮಾಧ್ಯಮಗಳಿಂದ ಆಗಬೇಕಿದ್ದು, ತಾಲೂಕಿನ ಅಭಿವೃದ್ಧಿಯಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.

    ಅಲ್ಲದೆ, ತಾಲೂಕಿನಲ್ಲಿ ಪತ್ರಕರ್ತರ ಅನುಕೂಲಕ್ಕಾಗಿ ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ದೊರೆತರೆ, ಭವ್ಯ ಕಟ್ಟಡ ನಿರ್ಮಿಸಲು ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

    ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ದೇವರು ಮಾತನಾಡಿ, ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿ ಆಡಳಿತ ವ್ಯವಸ್ಥೆಯನ್ನು ಎಚ್ಚರಿಸುವ ಕೆಲಸ ಮಾಧ್ಯಮಗಳಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು. ಪ್ರತಿಯೊಬ್ಬರೂ ದಿನಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಂಡರೆ ಜ್ಞಾನ ವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

    ಇದೇ ಸಂದರ್ಭದಲ್ಲಿ ಮೂರು ದಶಕಗಳಿಗೂ ಅಧಿಕ ಕಾಲ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿದ ಕಲಬುರಗಿ ವಿಭಾಗದ ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ ಸ್ಮರಣಾರ್ಥ ರಾಜ್ಯ ಮಟ್ಟದ ‘ಕನ್ನಡ ಜಂಗಮ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

    ವಿಶೇಷ ಉಪನ್ಯಾಸ ನೀಡಿದ ಬಾಬುರಾವ ಯಡ್ರಾಮಿ ಅವರು, ಪತ್ರಕರ್ತರು ಅರೆಬರೆ ಅಥವಾ ಪರಿಶೀಲಿಸದ ಸುದ್ದಿಗಳನ್ನು ಪ್ರಕಟಿಸದೆ, ಸತ್ಯ ಮತ್ತು ನಿಖರತೆಗೆ ಆದ್ಯತೆ ನೀಡಬೇಕು ಎಂದರು. ವೈಯಕ್ತಿಕ ವಿಚಾರಗಳಿಗಿಂತ ಸಾರ್ವಜನಿಕ ಹಿತಾಸಕ್ತಿ ಹಾಗೂ ಜನರ ಸಮಸ್ಯೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಆಡಳಿತ ವ್ಯವಸ್ಥೆಯನ್ನು ಸರಿದಾರಿಗೆ ತರುವ ಜವಾಬ್ದಾರಿಯುತ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

    ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವೆ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳ ಪಾತ್ರ ಅನನ್ಯವಾಗಿತ್ತು. ಗಡಿಭಾಗದಲ್ಲಿ ಅನ್ಯ ಭಾಷೆಗಳ ಪ್ರಭಾವ ಹೆಚ್ಚಿರುವುದರಿಂದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯೂ ಪತ್ರಕರ್ತರ ಮೇಲಿದೆ ಎಂದರು. ಊಹಾಪೋಹಗಳಿಗೆ ಆಸ್ಪದ ನೀಡದೆ ಪ್ರಾಮಾಣಿಕ ಹಾಗೂ ವಸ್ತುನಿಷ್ಠ ಸುದ್ದಿಗಳನ್ನು ತಲುಪಿಸುವಂತೆ ಮನವಿ ಮಾಡಿದರು.

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅಧ್ಯಕ್ಷತೆ ವಹಿಸಿ, ಗ್ರಾಮೀಣ ಪತ್ರಕರ್ತರ ಹಿತರಕ್ಷಣೆಗೆ ಸಂಘವು ಬದ್ಧವಾಗಿದ್ದು ಶೀಘ್ರದಲ್ಲೇ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದರು. ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಹೇಶ್ ಪಾಟೀಲ್, ತಾಲೂಕು ಪಂಚಾಯಿತಿ ಇಒ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಸಂಘದ ಕಾರ್ಯದರ್ಶಿ ಅನಿಲಕುಮಾರ ದೇಶಮುಖ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕಿನ ಪತ್ರಕರ್ತರು ಉಪಸ್ಥಿತರಿದ್ದರು. ಮಲ್ಲಪ್ಪ ಗೌಡಾ ಸ್ವಾಗತಿಸಿದರೆ, ರಿಯಾಜಪಾಶಾ ಕೊಳ್ಳೂರು ನಿರೂಪಿಸಿ, ಮನ್ಮಥ ಸ್ವಾಮಿ ವಂದಿಸಿದರು.

    ವರದಿ: ಅರವಿಂದ ಮಲ್ಲೀಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.