ತುಮಕೂರು: ಪಠ್ಯಕ್ಕೆ ಸಂಬಂಧಿಸಿದ ಉತ್ತಮ ವಿಚಾರ ಸೇರಿದಂತೆ ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಬೇಕೆಂದು ಮಕ್ಕಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ನ್ಯಾಯಾಧೀಶರಾದ ನೂರುನ್ನೀಸಾ ಕರೆ ನೀಡಿದರು.
ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ತುಮಕೂರು ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಊರುಕೆರೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿಂದು ಊರುಕೆರೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ–2024ರ ಪ್ರಯುಕ್ತ ಹಮ್ಮಿಕೊಂಡಿದ್ದ ತಾಯಿಯ ಹೆಸರಿನಲ್ಲಿ ಗಿಡನೆಡುವ ಮತ್ತು ಪ್ರತಿಜ್ಞಾವಿಧಿ ಬೋಧಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಾಲಾ-ಕಾಲೇಜಿನ ಮಕ್ಕಳಿಗೆ ಪೋಕ್ಸೋ ಕಾಯ್ದೆ, ಜೀವನದ ಮೌಲ್ಯಗಳ ಬಗ್ಗೆ ಶಿಕ್ಷಕರು/ಪೋಷಕರು ತಿಳುವಳಿಕೆ ನೀಡಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎಲ್. ಚೇತನ್‌ಕುಮಾರ್ ಮಾತನಾಡಿ, ಗರ್ಭಿಣಿ, ಬಾಣಂತಿ ಹಾಗೂ ಕಿಶೋರಿಯರು ಪೌಷ್ಟಿಕಯುಕ್ತ ಆಹಾರವನ್ನು ಸೇವಿಸಬೇಕು ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷಕುಮಾರ್ ಮಾತನಾಡಿದರು. ಕಾರ್ಯಕ್ರಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ದಿನೇಶ ಆರ್.ಎಂ., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಶಿಧರ ಪಿ., ಊರುಕೆರೆ ಪಂಚಾಯತಿ ಪಿಡಿಓ ರವಿಕುಮಾರ್, ಅಧ್ಯಕ್ಷೆ ಗಂಗಮ್ಮ, ಊರುಕೆರೆ ಸರ್ಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ತ್ರಿವೇಣಿ, ವೃತ್ತ ಮೇಲ್ವಿಚಾರಕಿ ಲಕ್ಷ್ಮವ್ವ ಜೆ.ಸಿ., ಪೋಷಣ್ ಅಭಿಯಾನದ ಜಿಲ್ಲಾ ಸಂಯೋಜಕರಾದ ರಂಜಿತಾ,. ತುಮಕೂರು ಗ್ರಾಮಾಂತರ ತಾಲ್ಲೂಕು ಸಂಯೋಜಕ ಶಶಿಕುಮಾರ್ ಎಸ್., ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಗರ್ಭಿಣಿ ಬಾಣಂತಿಯರು, ಕಿಶೋರಿಯರು, ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q