ಚಿಕ್ಕೋಡಿ: ಹಿರೇಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜುಲೈ 21 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ದಲಾಯತ್ ಗೆ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯ ನ್ಯಾಯಾಧೀಶ ಚಿದಾನಂದ ಬಡಿಗೇರ ಆದೇಶ ಹೊರಡಿಸಿದ್ದಾರೆ.
7 ದಿನಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಬ್ಬರೂ ಆರೋಪಿಗಳನ್ನು ಸೋಮವಾರ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದರು. ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ಪೊಲೀಸರು, ಬಳಿಕ ಇಬ್ಬರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


