ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಸೆ.12 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಇಂದು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು. ಪ್ರಕರಣದ ಎಲ್ಲ 17 ಆರೋಪಿಗಳನ್ನು ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಲಾಯ್ತು.
ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ. ಇನ್ನೂ ಈ ಪ್ರಕರಣ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ ಕೊಲೆ ಆರೋಪ ಹೊತ್ತ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q