ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ದರ್ಶನ್ ಹಾಗೂ ಇತರ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಬೆನ್ನಲ್ಲೇ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು.
ನ್ಯಾಯಾಧೀಶರು ಆರೋಪಿಗಳ ಹೆಸರು ಹೇಳಿ ಹಾಜರಾತಿ ಪಡೆದರು. ಬಳಿಕ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296