ವಿಜಯನಗರ: ಇಸ್ಪಿಟ್ ಅಡ್ಡೆಯ ಮೇಲೆ ದಾಳಿ ಮಾಡಿದ ನಂತರ, ಕಾನೂನು ಕ್ರಮ ಕೈಗೊಳ್ಳದೇ ದಾಳಿ ನಡೆಸಿದ ಆ ವಿಷಯವನ್ನೇ ಮುಚ್ಚಿಟ್ಟು, ದಾಳಿಯೇ ನಡೆದಿಲ್ಲ ಎಂಬ ನಡೆಯನ್ನು ಪೊಲೀಸರು ತೋರಿದ್ದಾರೆ.
ಈ ಹಿನ್ನಲೆಯಲ್ಲಿ ಪೊಲೀಸರ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿ ಗ್ರಾಮಸ್ಥರೇ ಶಾಕ್ ನೀಡಿದ್ದಾರೆ.
ದೀಪಾವಳಿ ಹಬ್ಬದಂದು ಇಸ್ಪಿಟ್ ಆಡುತ್ತಿದದಂತ ಜೂಜು ಕೋರರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಜೂಜುಕೋರರಿಂದ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿದ್ದಾರೆ.
ಈ ಬಗ್ಗೆ ಸ್ಥಳೀಯರಾದಂತ ವೆಂಕಟೇಶ್ ಎಂಬುವರು ಠಾಣೆಗೆ ತೆರಳಿ ದೂರು ದಾಖಲಾದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.
ಹೀಗಾಗಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದರೂ, ಪ್ರಕರಣ ದಾಖಲಿಸದೇ ಇದ್ದಂತ ಪೊಲೀಸರ ವಿರುದ್ಧ ನಂತರ ವೆಂಕಟೇಶ್ ನಾಲ್ವರು ಪೊಲೀಸ್ ಪೇದಗಳ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ನಾಲ್ವರು ಪೇದೆಗಳಾದ ಮಹೇಶ. ಅಭಿಷೇಕ್. ಮಂಜುನಾಥ, ಶ್ರೀಕಾಂತರನ್ನು ಪೊಲೀಸರು ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ.
ನ್ಯಾಯಾಲಯ ನಾಲ್ವರು ಪೇದೆಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನಂತರ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ನಾಲ್ವರು ಪೇದೆಗಳನ್ನು ಅಮಾನತು ಮಾಡಿ ಎಸ್.ಪಿ ಡಾ. ಕೆ ಅರುಣ್ ಆದೇಶ ಹೊರಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz