ಗುಬ್ಬಿ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ನಿರತರಾಗಿದ್ದವರ ಮೇಲೆ ಗುಬ್ಬಿ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಸಿಬ್ಭಂದಿ ದಾಳಿ ನಡೆಸಿದ ಘಟನೆ ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಅಮ್ಮನಘಟ್ಟ ಗ್ರಾಮದ ವರದೇನಹಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ.
ದಾಳಿ ವೇಳೆ ಮೂವರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, 2 ಮೊಬೈಲ್, 9 ದ್ವಿಚಕ್ರ ವಾಹನ ಹಾಗೂ ಜೂಜಾಟಕ್ಕೆ ಬಳಸಿದ್ದ 2,700 ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. 8 ಮಂದಿ ಜೂಜಾಟದಲ್ಲಿ ನಿರತರಾಗಿದ್ದು, ಈ ಪೈಕಿ 5 ಮಂದಿ ಪೊಲೀಸರ ದಾಳಿ ವೇಳೆ ಸ್ಥಳದಿಂದ ಪರಾರಿಯಾಗಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಿಪಿಐ ಎಫ್ ಕೆ ನದಾಫ್ ಹಾಗೂ ಸಿಬ್ಬಂದಿ ಪೃಥ್ವಿರಾಜ್, ಪಾತರಾಜು, ಧನಂಜಯ, ನಾಗರಾಜ್, ರಬ್ಬಾನಿ ದಾಳಿಯಲ್ಲಿ ಭಾಗವಹಿಸಿದ್ದರು. ಘಟನೆ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700