ನಾಡಿನ ಸಮಸ್ತ ಪತ್ರಕರ್ತ ಹಾಗೂ ಮಾಧ್ಯಮ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು
ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ, 1843 ಜುಲೈ 1ರಂದು ಪ್ರಾರಂಭವಾಯಿತು, ಹಾಗಾಗಿ ಕರ್ನಾಟಕದಲ್ಲಿ ಸ್ಮರಣಾರ್ಥವಾಗಿ ಈ ದಿನವನ್ನು ಭಾರತದ ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ.ಪತ್ರಿಕಾ ದಿನವನ್ನು ಜುಲೈ 1ರಂದು ಆಚರಿಸಲಾಗುತ್ತದೆ.
ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಮಾನಗಳನ್ನು,ಕ್ಷಣ ಕ್ಷಣದ ಮಾಹಿತಿಗಳನ್ನು ಜನರಿಗೆ ತಲುಪಿಸಿ, ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಿಕಾ ಮಾಧ್ಯಮದ ಎಲ್ಲಾ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು.
ದಮನಿತರ ನೋವಿಗೆ ಧ್ವನಿಯಾಗಿ ನ್ಯಾಯ ಒದಗಿಸಿಕೊಡುವ ಅಕ್ಷರ ಲೋಕ, ಸಮಾಜದ ಅಂಕುಡೊಂಕುಗಳನ್ನು ಜಗದ ಮುಂದಿಡುವ ನಿರ್ಭೀತ ರಂಗದ ಸೇವೆಗೆ ಶರಣು ಎನ್ನೋಣ.
ಪತ್ರಿಕೋದ್ಯಮ ಪ್ರಜಾಪ್ರಭುತ್ವದ ನಾಲ್ಕನೆಯ ಸ್ತಂಭವಾಗಿದ್ದು, ಜನಸಾಮಾನ್ಯರು ಮತ್ತು ಸರ್ಕಾರಗಳ ನಡುವೆ ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ.
ನವೆಂಬರ್ 1966 ರಲ್ಲಿ, ಭಾರತೀಯ ಮಾಧ್ಯಮ ಮತ್ತು ಪತ್ರಿಕಾ ಮಾಧ್ಯಮದ ಸರಿಯಾದ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು, ವರದಿಯ ಗುಣಮಟ್ಟವನ್ನು ಪರಿಶೀಲಿಸಲು ನ್ಯಾಯಮೂರ್ತಿ ಜೆ.ಆರ್.ಮುಧೋಲ್ಕರ್ ಅವರ ನೇತೃತ್ವದಲ್ಲಿ PCI ಅಥವಾ ಭಾರತೀಯ ಪತ್ರಿಕಾ ಆಯೋಗವನ್ನು ರಚಿಸಲಾಯಿತು. PCI ಯ ಕೆಲಸವು ಪತ್ರಿಕಾ ಮತ್ತು ಮಾಧ್ಯಮವು ಯಾವುದೇ ಪ್ರಭಾವ ಅಥವಾ ಬಾಹ್ಯ ಅಂಶಗಳಿಂದ ವಂಚಿತವಾಗದಂತೆ ನೋಡಿಕೊಳ್ಳುವುದು. ಜುಲೈ 4 ರಂದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವನ್ನು ಸ್ಥಾಪಿಸಿತು. ನಂತರ ಅದು ನವೆಂಬರ್ 16 ರಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿತು.ಹಾಗಾಗಿ ಅಂದೂ ಸಹ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.
–ನಂದೀಶ್ ನಾಯ್ಕ ಪಿ.
ಪ್ರಥಮ ವರ್ಷದ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ, ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು–ತುಮಕೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW