ಚಿಕ್ಕನಾಯಕನಹಳ್ಳಿ: ಆಡಳಿತ, ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ನಾಡಪ್ರಭು ಕೆಂಪೇಗೌಡ ಪತ್ತಿನ ಸಹಕಾರ ಸಂಘದ ವತಿಯಿಂದ 517ನೇ ಕೆಂಪೇಗೌಡ ಜಯಂತಿ ಹಾಗೂ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರವನ್ನು ಕಾರ್ಯಕ್ರಮವನ್ನು ಜು.25ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀ ಹರ್ಷ ತಿಳಿಸಿದರು.
ಪಟ್ಟಣದ ತೀ.ನಂ.ಶ್ರೀ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ದಿವ್ಯಾಶೀರ್ವಾದ ದೊಂದಿಗೆ ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ನಂಜಾವಧೂತ ಮಹಾಸ್ವಾಮೀಜಿಗಳು ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಘನ ರಾಜ್ಯದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಉಪಸ್ಥಿತರಿರುವರು. ಶಾಸಕ ಸಿ.ಬಿ.ಸುರೇಶ್ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀ ಹರ್ಷ ಟಿ.ಎಂ ಉದ್ಘಾಟನೆ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಚಿದಾನಂದ ಎಂ.ಗೌಡ, ರಾಜೇಂದ್ರ ಆರ್, ಡಿ.ಟಿ.ಶ್ರೀನಿವಾಸ್, ರಮೇಶ್ ಬಾಬು, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್ ಆಗಮಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕೆ.ಪಿ.ಸಿ.ಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾಯಪ್ಪ, ಲೋಕೇಶ್ ನಾಗರಾಜಯ್ಯ, ತಿಪಟೂರು ಸಮಾಜ ಸೇವಕ ಶಾಂತಕುಮಾರ್, ಹೃದಯ ರೋಗ ತಜ್ಞ ಡಾ.ಪರಮೇಶ್ವರಪ್ಪ ಎಸ್.ಆರ್, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಕಾಂತರಾಜು ಆಗಮಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ದೀಪಾಲೋಲನ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಹಿರಿಯ ಉಪವಿಭಾಗಾಧಿಕಾರಿ ಸಪ್ತಶ್ರೀ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎನ್.ರಮೇಶ್ ಹಾಗೂ ತಹಶೀಲ್ದಾರ್ ಮಮತ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಶಿವರಾಜು, ಪುರಸಭೆ ಮುಖ್ಯಾಧಿಕಾರಿ ಮಂಜುಳಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕಾಂತರಾಜು, ಆರಕ್ಷಕ ವೃತ್ತ ನಿರೀಕ್ಷಕ ಜನಾರ್ಧನ್ ಪಿ.ಆರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಮಾಜದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಹೆಚ್ಚಿನ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕಾರ್ಯಕ್ರಮದಲ್ಲಿ ಹಾಜರಿದ್ದ ಪದಾಧಿಕಾರಿಗಳು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಪಿ.ಹರೀಶ್, ಉಪಾಧ್ಯಕ್ಷ ಕೆ.ಜಿ.ಕೃಷ್ಣಗೌಡ, ಪದಾಧಿಕಾರಿಗಳಾದ ಸಂದೇಶ್ ಗೌಡ, ರಾಮಯ್ಯ, ನಿರಂಜನ್ ಮೂರ್ತಿ, ಪಿ.ಎಲ್. ರೇಣುಕಪ್ರಸಾದ್, ಯಶ್ವಂತ್, ಶಿವಶಂಕರಪ್ಪ, ಲಿಂಗರಾಜು, ಭಾಸ್ಕರ್, ಲಕ್ಷ್ಮಿಕಾಂತ್ ಮೊದಲಾದವರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


