ಬೆಂಗಳೂರು: ಈಗಾಗಲೇ ಬೆಂಗಳೂರು, ರಾಜ್ಯಾದ್ಯಂತತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಕಿರುಕುಳ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಬಳಿಕ ಮತ್ತೆ ಜುಲೈ.26ರಂದು ಬೆಂಗಳೂರಿನ ಕಾಂಗ್ರೆಸ್ ಭನದ ಗಾಂಧಿ ಪ್ರತಿಮೆ ಬಳಿಯಲ್ಲಿ ರಾಜ್ಯದ ಎಲ್ಲಾ ನಾಯಕರು ಮೌನ ಸತ್ಯಾಗ್ರಾಹ ನಡೆಸೋದಕ್ಕೆ ನಿರ್ಧರಿಸಲಾಗಿದೆ.
ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮಾಹಿತಿ ನೀಡಿದಂತ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ‘ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ನ್ಯಾಯಾಲಯದ ಮೊರೆ ಹೋಗಿದ್ದೆ ಎಂದರು.
ಆದರೆ, ಸೋನಿಯಾ ಗಾಂಧಿ ಅವರು ನ್ಯಾಯಾಲಯದ ಮೊರೆ ಹೋಗದೆ ಧೈರ್ಯವಾಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಆದರೂ ಕಿರುಕುಳ ನಿಲ್ಲುತ್ತಿಲ್ಲ. ಹೀಗಾಗಿ ಬೆಂಗಳೂರಿನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ರಾಜ್ಯದ ಎಲ್ಲ ನಾಯಕರು, ಶಾಸಕರು, ಬ್ಲಾಕ್ ಅಧ್ಯಕ್ಷರು, ಕಾರ್ಪೊರೇಟರ್, ಮಾಜಿ ಕಾರ್ಪೊರೇಟರ್, ಪಕ್ಷದ ಪದಾಧಿಕಾರಿಗಳು ಎಲ್ಲರೂ 26 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಮೌನ ಸತ್ಯಾಗ್ರಹ ಮಾಡಲಿದ್ದೇವೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz