ಪ್ರಸಿದ್ಧ ಅಮರನಾಥ ಯಾತ್ರೆಗೆ ಜೂನ್ ೩೦ ರಿಂದ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಕೈಗೊಳ್ಳಬೇಕಾಗಿರುವ ಭದ್ರತೆ ಬಗ್ಗೆ ಚರ್ಚೆ ನಡೆಸಲಾಯಿತು.
ಇತ್ತೀಚೆಗೆ ಕಾಶ್ಮೀರ ಪಂಡಿತ ಸಮುದಾಯದ ನೌಕರ ರಾಹುಲ್ ಭಟ್ ಅವರನ್ನು ಭಯೋತ್ಪಾದಕ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಗ್ಗೆ ಕಾಶ್ಮೀರಿ ಪಂಡಿತರು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅಮಿತ್ ಷಾ ಈ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಜಮ್ಮು-ಕಾಶ್ಮೀರದ ಲೆಫ್ಟಿನೆಟ್ ಗವರ್ನರ್ ಮನೋಜ್ ಸಿನ್ಹಾ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಗುಪ್ತಚರ ಇಲಾಖೆಯ ಮುಖ್ಯಸ್ಥ ಅರವಿಂದ್ ಕುಮಾರ್, ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದವು.
ಹಿಂದಿನ ಸಭೆಯಲ್ಲಿ ಅಮರನಾಥ್ ದೇವಾಲಯದ ಆಡಳಿತ ಮಂಡಳಿ ಸದಸ್ಯರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಜಮ್ಮು- ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭದ್ರತಾ ಸಂಸ್ಥೆಗಳಿಗೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಮರನಾಥ ಯಾತ್ರೆಗೆ ಈಗಾಗಲೇ ಆನ್‌ಲೈನ್ ಮೂಲಕ ನೋಂದಣಿ ಪ್ರಾರಂಭವಾಗಿದ್ದು ಜೂನ್ 30 ರಿಂದ ಆ. 11 ರವರೆಗೆ 43 ದಿನಗಳ ಕಾಲ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಕೋವಿಡ್ ಕಾರಣದಿಂದಾಗಿ 2ವರ್ಷದಿಂದ ಅಮರನಾಥ ಯಾತ್ರೆ ರದ್ದು ಪಡಿಸಲಾಗಿತ್ತು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5