ನಾನು ಹಿಟ್ ಅಂಡ್ ರನ್ ಮಾಡುವ ವ್ಯಕ್ತಿ ಅಲ್ಲ. ನಡೆದಿರುವುದನ್ನು ನಾನು ಹೇಳಿದ್ದೇನೆ. ಮಿಸ್ಟರ್ ಸಿದ್ದರಾಮಯ್ಯ ನಿಮ್ಮಂತೆ ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ನಾನು ಹಿಟ್ ಅಂಡ್ ರನ್ನಾ? ಯಾವುದರಲ್ಲಿ ಹಿಟ್ ಅಂಡ್ ರನ್? ತೋರಿಸಿ ನೋಡೋಣ. ಸುಮ್ಮನೆ ನನ್ನನ್ನು ಕೆಣಕಬೇಡಿ ಎಂದರು.
ಹಿಟ್ ಅಂಡ್ ರನ್ ಮಾಡ್ತಾ ಇರೋದು ನೀವು. ಬಿಜೆಪಿ ಸರಕಾರದ ಮೇಲೆ 40% ಆರೋಪ ಮಾಡಿದಿರಿ. ಆ ಆರೋಪಗಳ ಕಥೆ ಏನಾಯಿತು? ಒಂದು ದಾಖಲೆಯನ್ನಾದರೂ ಹೊರಗೆ ಬಿಟ್ರಾ? ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೆ? ಎಂದು ಕುಮಾರಸ್ವಾಮಿ ಟೀಕಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


