ತುಮಕೂರು: ಹಿರೇಹಳ್ಳಿ ಎಸ್.ಬಿ.ಐ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ 13 ದಿನಗಳ ಜೂಟ್ ಉತ್ಪನ್ನಗಳ ತಯಾರಿಕೆ(JUTE PRODUCTS UTPADAK) ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಅವಧಿಯಲ್ಲಿ ಉಚಿತ ವಸತಿ–ಊಟದ ವ್ಯವಸ್ಥೆ ಮಾಡಲಾಗುವುದು. ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವಯೋಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು ನೇರವಾಗಿ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ– ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕರ ಕಚೇರಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಜನವರಿ 28ರೊಳಗಾಗಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2243386, ಮೊ.ಸಂ. 9738351048, 9663680001ನ್ನು ಸಂಪರ್ಕಿಸಬಹುದಾಗಿದೆ ಎಂದು ತರಬೇತಿ ಸಂಸ್ಥೆ ನಿರ್ದೇಶಕ ಕೆ.ಎನ್. ವಾದಿರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4