ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಅವರನ್ನು ಸಂಪುಟದಿಂದ ವಜಾ ಮಾಡಲಾಗಿತ್ತು. ಇದರ ಬೆನ್ನಲ್ಲೇ ಮೊದಲ ಪ್ರತಿಕ್ರಿಯೆ ನೀಡಿರುವ ಕೆ.ಎನ್.ರಾಜಣ್ಣ, ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ ಎಂದಿದ್ದಾರೆ.
ಮತಕಳವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ಕೆ.ಎನ್.ರಾಜಣ್ಣ ತಲೆ ದಂಡ ಆಗಿದ್ದು, ಸಂಪುಟದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ. ಈ ಪಿತೂರಿ, ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನೋದು ಗೊತ್ತು. ನನ್ನ ಬಳಿ ಇರುವ ಈ ಷಡ್ಯಂತ್ರ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದಿದ್ದಾರೆ.
ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC