ರಾಮನಗರ: ಕೆ.ಎನ್.ರಾಜಣ್ಣ ಬಿಜೆಪಿಗೆ ಹೋಗಲು ಅರ್ಜಿ ಹಾಕಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎನ್.ರಾಜಣ್ಣರನ್ನ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಒತ್ತಡ ಹೇರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ನನಗಿರುವ ಮಾಹಿತಿ ಪ್ರಕಾರ ಕೆ.ಎನ್.ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ. ಹೈಕಮಾಂಡ್ ವಿರುದ್ಧ ಮಾತನಾಡಿದ್ದಕ್ಕೆ ಅವರು ವಜಾ ಆಗಿದ್ದಾರೆ. ಹೀಗಾಗಿ ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ ಎಂದರು.
ದೆಹಲಿಯಲ್ಲಿ ಸಮಾವೇಶ ಮಾಡ್ತಾರಂತೆ ಮಾಡಲಿ. ಕೆ.ಎನ್.ರಾಜಣ್ಣ ಬಿಜೆಪಿಗೆ ಹೋಗ್ತಿದ್ದಾರೋ? ಇಲ್ವೋ? ಅಂತ ಅವರನ್ನೇ ಕೇಳಿ. ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಿದ್ರೆ ಎಲ್ಲಾ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC