ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪದ ತನಿಖೆ ನಡೆಸುತ್ತಿದ್ದ ಸಿಐಡಿಗೆ, ಆರೋಪಗಳಿಗೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು, ಹನಿಟ್ರ್ಯಾಪ್ ಪ್ರಯತ್ನಗಳ ಕುರಿತು ಸಚಿವರ ಹೇಳಿಕೆಗಳನ್ನು ಬೆಂಬಲಿಸಲು ಯಾವುದೇ ಗಣನೀಯ ಪುರಾವೆಗಳು ಸಿಕ್ಕಿಲ್ಲ ಎಂದು ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.
ವರದಿ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಪರಮೇಶ್ವರ್ ಅವರು, ಸಚಿವ ರಾಜಣ್ಣ ಹನಿಟ್ರ್ಯಾಪ್ ದೂರು ವಿಚಾರಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ವರದಿ ಕೊಟ್ಟಿದ್ದಾರೆ. ಅದರಲ್ಲಿ ಏನಿದೆ ಎಂಬುದನ್ನು ನಾನು ಇನ್ನೂ ಓದಿಲ್ಲ ಎಂದು ಹೇಳಿದರು.
ವರದಿಯಂತೂ ಕೈಸೇರಿದೆ. ಆದರೆ ಇನ್ನೂ ಅದರಲ್ಲಿ ಏನಿದೆ ಎಂದು ನೋಡಿಲ್ಲ. ವರದಿ ನೋಡಿದ ಮೇಲೆ ಮಾತನಾಡುತ್ತೇನೆ. ಪ್ರಕರಣ ಚರ್ಚೆ ಸದನದಲ್ಲಿ ಆಯಿತು. ಇದರ ಬಗ್ಗೆ ನೀವು ಸದ್ದು ಮಾಡಿದಿರಿ. ಈ ಸದ್ದಿಗೆ ಸಿಐಡಿಯವರು ಉತ್ತರ ಕೊಟ್ಟಿದ್ದಾರೆ. ಏನಿದೆ ಮೊದಲು ನೋಡೋಣ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC