ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜೀನಾಮೆ ಪತ್ರವನ್ನು ಕೆ.ಎನ್.ರಾಜಣ್ಣ ಸಲ್ಲಿಸಿದ್ದಾರೆ.
ಹೈಕಮಾಂಡ್ ಸೂಚನೆಯ ಮೇರೆಗೆ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ರಾಜೀನಾಮೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದಿದ್ದಾರೆ.
ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC