ಮಂಡ್ಯ: ನಾನು ರೈತನ ಮಗ ರೈತರ ಸಮಸ್ಯೆ ಅರಿವಿದೆ, ಒಂದು ಬಾರಿ ಅವಕಾಶ ನೀಡಿದರೆ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿ ಎಚ್.ಟಿ.ಮಂಜು ರವರು ಮತದಾರರಲ್ಲಿ ಮನವಿ ಮಾಡಿದರು
ತಾಲೂಕು ಅಧ್ಯಕ್ಷ ಜಾನಕಿರಾಮ್ ರವರ ನೇತೃತ್ವದಲ್ಲಿ ಜೆಡಿಎಸ್ ಅಧಿಕೃತ ಅಭ್ಯರ್ಥಿ ಎಚ್.ಟಿ.ಮಂಜುರವರು ಕಾರ್ಯಕರ್ತರ ಜೊತೆಗೂಡಿ ಕೆ.ಆರ್.ಪೇಟೆ ತಾಲೂಕಿನ ಸಂತೆಬಾಚಹಳ್ಳಿ ಹೋಬಳಿಯ ನಾಯಕನಹಳ್ಳಿ,ಬಿಕ್ಕಸಂದ್ರ, ಅಪ್ಪನಹಳ್ಳಿ, ಮಾವಿನಕಟ್ಟೆ ಕೋಪಲು, ಮಾಳಗೂರು, ಆದಿಹಳ್ಳಿ, ಗೊರವಿ, ಹೆತ್ತಗೋನಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳ ಮತದಾರ ಮನೆಗಳಿಗೆ ತೆರಳಿ ಮತಯಾಚಿಸಿದರು.
ನಾನು ಒಬ್ಬ ಬಡ ಕುಟುಂಬ ರೈತನ ಮಗ. ರೈತರ ಕಷ್ಟ ಏನು ಎಂದು ನನಗೂ ತಿಳಿದಿದೆ. 2023 ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಮತವನ್ನು ನೀಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಟ್ಟಲ್ಲಿ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ರೈತರು ಯಾವುದೇ ಸಾಲ ಮಾಡದೇ ಕೃಷಿ ಕಾರ್ಯದಲ್ಲಿ ತೊಡಗಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಬಳಿಕ ಮಾತನಾಡಿದ ತಾಲೂಕು ಅಧ್ಯಕ್ಷ ಜಾನಕಿರಾಮ್, ನಮ್ಮ ಪಕ್ಷ ವರಿಷ್ಠರು ಅಧಿಕೃತ ಯುವ ಅಭ್ಯರ್ಥಿ ಹೆಚ್.ಟಿ.ಮಂಜು ಅವರನ್ನ ಘೋಷಣೆ ಮಾಡಿದೆ. ರೈತರ ಉಳಿವಿಗಾಗಿ ನಮ್ಮ ಪಕ್ಷದ ಪಂಚರತ್ನ ಯೋಜನೆಗಳು ಜಾರಿಗೆ ಬರಬೇಕೆಂದರೆ, ಜೆಡಿಎಸ್ ಪಕ್ಷಕ್ಕೆ ಮತ ನೀಡಿಬೇಕು. ಎರಡು ದಿನಗಳಿಂದ ನಡೆಯುತ್ತಿರುವ ಮತಯಾಚನೆ ಕಾರ್ಯಕ್ರಮ ಅಭೂತಪೂರ್ವವಾಗಿ ಯಶಸ್ವಿ ಕಾಣುತ್ತಿದೆ. ಈ ಮಾದರಿಯಲ್ಲೇ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೊಸಹೊಳಲು ಅಶೋಕ್, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಟಿಎಪಿಸಿಎಂಎಸ್ ನಿರ್ದೇಶಕ ತೆರ್ನೇನಹಳ್ಳಿ ಬಲದೇವ್, ಮಂಜುನಾಥ್, ಗ್ರಾ.ಪಂ.ಸದಸ್ಯ ಸಿದ್ದೇಶ್, ಮಂಡ್ಯ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಅಗ್ರಹಾರಬಾಚಹಳ್ಳಿ ನಾಗೇಶ್, ಸಂತೆಬಾಚಹಳ್ಳಿ ಹೋಬಳಿ ಜೆಡಿಎಸ್ ಅಧ್ಯಕ್ಷ ರವಿಕುಮಾರ್, ಹೆಚ್.ಟಿ.ಲೋಕೇಶ್, ಬ್ಯಾಲದಕೆರೆ ನಂಜೇಗೌಡ, ಗೊರವಿ ದೇವೇಗೌಡ, ದಿಲೀಪ್, ಆದಿಹಳ್ಳಿ ನಾಗೇಶ್, ಎಚ್.ಜಿ.ಬಾಬು, ಬಂಡಿಹೊಳೆ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ವಡ್ಡರಹಳ್ಳಿ ಮಹದೇವೇಗೌಡ, ಮುಖಂಡ ಐಕನಹಳ್ಳಿ ದೇವೇಗೌಡ, ಕುಪ್ಪಳ್ಳಿ ಪ್ರಭುದೇವ್, ಹೆಗ್ಗಡಹಳ್ಳಿ ಅಲೋಕ್, ರುದ್ರೇಶ್, ಸೇರಿದಂತೆ ಉಪಸ್ಥಿತರಿದ್ದರು.
ವರದಿ: ಮಂಡ್ಯ ಶ್ರೀನಿವಾಸ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


