nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತನ ಮಗನಾಗಿ ರೈತರ ಸಮಸ್ಯೆ ಅರಿವಿದೆ: ಕೆ.ಆರ್.ಪೇಟೆಯಲ್ಲಿ ಮತಬೇಟೆ ಆರಂಭಿಸಿದ ಜೆಡಿಎಸ್ ಅಭ್ಯರ್ಥಿ
    ಜಿಲ್ಲಾ ಸುದ್ದಿ January 10, 2023

    ರೈತನ ಮಗನಾಗಿ ರೈತರ ಸಮಸ್ಯೆ ಅರಿವಿದೆ: ಕೆ.ಆರ್.ಪೇಟೆಯಲ್ಲಿ ಮತಬೇಟೆ ಆರಂಭಿಸಿದ ಜೆಡಿಎಸ್ ಅಭ್ಯರ್ಥಿ

    By adminJanuary 10, 2023No Comments2 Mins Read
    kr pete jds

    ಮಂಡ್ಯ: ನಾನು ರೈತನ ಮಗ ರೈತರ ಸಮಸ್ಯೆ ಅರಿವಿದೆ, ಒಂದು ಬಾರಿ ಅವಕಾಶ ನೀಡಿದರೆ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ  ಜೆಡಿಎಸ್ ಅಧಿಕೃತ ಅಭ್ಯರ್ಥಿ ಎಚ್.ಟಿ.ಮಂಜು ರವರು ಮತದಾರರಲ್ಲಿ ಮನವಿ ಮಾಡಿದರು

    ತಾಲೂಕು ಅಧ್ಯಕ್ಷ ಜಾನಕಿರಾಮ್ ರವರ ನೇತೃತ್ವದಲ್ಲಿ ಜೆಡಿಎಸ್ ಅಧಿಕೃತ ಅಭ್ಯರ್ಥಿ ಎಚ್.ಟಿ.ಮಂಜುರವರು ಕಾರ್ಯಕರ್ತರ ಜೊತೆಗೂಡಿ ಕೆ.ಆರ್.ಪೇಟೆ ತಾಲೂಕಿನ ಸಂತೆಬಾಚಹಳ್ಳಿ ಹೋಬಳಿಯ ನಾಯಕನಹಳ್ಳಿ,ಬಿಕ್ಕಸಂದ್ರ, ಅಪ್ಪನಹಳ್ಳಿ, ಮಾವಿನಕಟ್ಟೆ ಕೋಪಲು, ಮಾಳಗೂರು, ಆದಿಹಳ್ಳಿ, ಗೊರವಿ, ಹೆತ್ತಗೋನಹಳ್ಳಿ ಸೇರಿದಂತೆ ಹಲವಾರು  ಗ್ರಾಮಗಳ ಮತದಾರ ಮನೆಗಳಿಗೆ ತೆರಳಿ ಮತಯಾಚಿಸಿದರು.

    ನಾನು ಒಬ್ಬ ಬಡ ಕುಟುಂಬ ರೈತನ ಮಗ. ರೈತರ ಕಷ್ಟ ಏನು ಎಂದು ನನಗೂ ತಿಳಿದಿದೆ. 2023 ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಮತವನ್ನು ನೀಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಟ್ಟಲ್ಲಿ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ರೈತರು ಯಾವುದೇ ಸಾಲ ಮಾಡದೇ ಕೃಷಿ ಕಾರ್ಯದಲ್ಲಿ ತೊಡಗಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು.

    ಬಳಿಕ ಮಾತನಾಡಿದ ತಾಲೂಕು ಅಧ್ಯಕ್ಷ ಜಾನಕಿರಾಮ್,  ನಮ್ಮ ಪಕ್ಷ ವರಿಷ್ಠರು ಅಧಿಕೃತ ಯುವ ಅಭ್ಯರ್ಥಿ ಹೆಚ್.ಟಿ.ಮಂಜು ಅವರನ್ನ ಘೋಷಣೆ ಮಾಡಿದೆ. ರೈತರ ಉಳಿವಿಗಾಗಿ ನಮ್ಮ ಪಕ್ಷದ ಪಂಚರತ್ನ  ಯೋಜನೆಗಳು ಜಾರಿಗೆ ಬರಬೇಕೆಂದರೆ, ಜೆಡಿಎಸ್ ಪಕ್ಷಕ್ಕೆ ಮತ ನೀಡಿಬೇಕು. ಎರಡು ದಿನಗಳಿಂದ ನಡೆಯುತ್ತಿರುವ ಮತಯಾಚನೆ ಕಾರ್ಯಕ್ರಮ ಅಭೂತಪೂರ್ವವಾಗಿ ಯಶಸ್ವಿ ಕಾಣುತ್ತಿದೆ. ಈ ಮಾದರಿಯಲ್ಲೇ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದರು.

    ಈ ಸಂದರ್ಭದಲ್ಲಿ ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೊಸಹೊಳಲು ಅಶೋಕ್, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಟಿಎಪಿಸಿಎಂಎಸ್ ನಿರ್ದೇಶಕ ತೆರ್ನೇನಹಳ್ಳಿ ಬಲದೇವ್, ಮಂಜುನಾಥ್, ಗ್ರಾ.ಪಂ.ಸದಸ್ಯ ಸಿದ್ದೇಶ್, ಮಂಡ್ಯ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಅಗ್ರಹಾರಬಾಚಹಳ್ಳಿ ನಾಗೇಶ್, ಸಂತೆಬಾಚಹಳ್ಳಿ ಹೋಬಳಿ ಜೆಡಿಎಸ್ ಅಧ್ಯಕ್ಷ ರವಿಕುಮಾರ್, ಹೆಚ್.ಟಿ.ಲೋಕೇಶ್, ಬ್ಯಾಲದಕೆರೆ ನಂಜೇಗೌಡ, ಗೊರವಿ ದೇವೇಗೌಡ, ದಿಲೀಪ್, ಆದಿಹಳ್ಳಿ ನಾಗೇಶ್, ಎಚ್.ಜಿ.ಬಾಬು, ಬಂಡಿಹೊಳೆ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ವಡ್ಡರಹಳ್ಳಿ ಮಹದೇವೇಗೌಡ, ಮುಖಂಡ ಐಕನಹಳ್ಳಿ ದೇವೇಗೌಡ, ಕುಪ್ಪಳ್ಳಿ ಪ್ರಭುದೇವ್, ಹೆಗ್ಗಡಹಳ್ಳಿ ಅಲೋಕ್, ರುದ್ರೇಶ್, ಸೇರಿದಂತೆ ಉಪಸ್ಥಿತರಿದ್ದರು.

    ವರದಿ: ಮಂಡ್ಯ ಶ್ರೀನಿವಾಸ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ

    August 11, 2026

    ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!

    August 11, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.