ಕೆ.ಆರ್.ಪೇಟೆ: ತಾಲ್ಲೂಕು ಹೊಸಹೊಳಲು ಗ್ರಾಮದ ಪ್ರಾಚೀನ ಹೊಯ್ಸಳ ಶಿಲ್ಪ ಕಲೆ ವಿಶಿಷ್ಠವಾದ ಸುಂದರ ದೇವಾಲಯದಲ್ಲಿ ಪ್ರತಿಷ್ಟಾಪಿಸ್ಪಟ್ಟಿರುವ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಬ್ರಹ್ಮ ರಥೋತ್ಸವವು ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ವಿಜೃಂಭಣೆಯಿಂದ ಆಚರಿಸಲಾಯಿತು.
ಮಧ್ಯಾಹ್ನ 12:45 ಸಮಯದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ದೇವಾಲಯದ ಆವರಣದಲ್ಲಿ ರಥೋತ್ಸವ ಅಂಗವಾಗಿ ರಥೋತ್ಸವದಲ್ಲಿ ಲಕ್ಷ್ಮೀ ನಾರಾಯಣ ಸ್ವಾಮಿಯ ವಿಗ್ರಹವನ್ನು ಕುಳ್ಳಿರಿಸಿ ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ ಸಿಂಗರಿಸಿ ತಾಲ್ಲೂಕಿನ ದಂಡಾಧಿಕಾರಿಗಳಾದ ಅಶೋಕ್ ಅವರು ವಿಶೇಷವಾಗಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ರಥೋತ್ಸವದ ಸಂದರ್ಭದಲ್ಲಿ ಸಮಾಜ ಸೇವಕ ಆರ್ ಟಿ ಒ ರಾಜ್ಯಾದ್ಯಕ್ಷ ಮಲ್ಲಿಕಾರ್ಜುನ್, ಹೊಸಹೊಳಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಶೋಕ್, ಪುರಸಭಾ ಅಧ್ಯಕ್ಷೆ ಪಂಕಜಾ ಪ್ರಕಾಶ್, ಉಪಾಧ್ಯಕ್ಷೆ ಸೌಭಾಗ್ಯ ಉಮೇಶ್, ಸದಸ್ಯರಾದ ಹೆಚ್.ಡಿ.ಅಶೋಕ್, ಪ್ರವೀಣ್, ಗಿರೀಶ್, ಸೊಸೈಟಿ ನಿರ್ದೇಶಕ ಪ್ರಕಾಶ್, ಇಂದ್ರಾಣಿ ವಿಶ್ವನಾಥ್, ಮಾಜಿ ಸದಸ್ಯ ಕೆ.ಆರ್. ಹೇಮಂತ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಬಾಬು ಸೇರಿದಂತೆ ಅನೇಕ ಗಣ್ಯರು, ಗ್ರಾಮದ ಮುಖಂಡರು ಭಾಗವಹಿಸಿದ್ದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4