ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕೆಆರ್ ಎಸ್ ಜಲಾಶಯ ಭರ್ತಿಯಾಗಲು ಇನ್ನು 4 ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ 51,375 ಕ್ಯೂಸೆಕ್ ಒಳ ಹರಿವು ಇದ್ದು ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು 124.80 ಅಡಿ ಸಾಮರ್ಥ್ಯವಿರುವ ಕೆಆರ್ ಎಸ್ ಜಲಾಶಯ ಸದ್ಯ 119.90 ಅಡಿ ತುಂಬಿದ್ದು ಸಂಪೂರ್ಣ ಭರ್ತಿಯಾಗಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ. ಎರಡು ವರ್ಷದ ಬಳಿಕ ಕೆಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


