ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತುಮಕೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರದ 2023ರ ಎಂಎಲ್ ಎ ಅಭ್ಯರ್ಥಿ ರಾಮಪ್ರಸಾದ್ ಪತ್ರಿಕಾ ಮಾಧ್ಯಮಗೋಷ್ಠಿ ನಡೆಸಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಯಾವೆಲ್ಲ ಯೋಜನೆಗಳನ್ನು ರೂಪಿಸಬೇಕು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು, ಎನ್ನುವ ನಿಟ್ಟಿನಲ್ಲಿ ರಾಜ್ಯದ ಜನಸಾಮಾನ್ಯರ ಜೊತೆ ಮತ್ತು ಚಿಂತಕರು ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದಗಳನ್ನು ನಡೆಸಿದ, ನಂತರ ನಮ್ಮ ಪಕ್ಷದ ವತಿಯಿಂದ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಅದರ ಪ್ರಮುಖ ಅಂಶಗಳನ್ನು ಈ ಪತ್ರಿಕಾ ಟಿಪ್ಪಣಿಯಲ್ಲಿ ವಿವರಿಸುತ್ತಿದ್ದೇನೆ ಎಂದರು.
ಮೊದಲನೆಯದಾಗಿ ಭ್ರಷ್ಟಾಚಾರ ಮುಕ್ತ ದಕ್ಷ ಆಡಳಿತ ನೀಡುವುದು, ಮನೆ ಬಾಗಿಲಿಗೆ ಸರ್ಕಾರಿ ಸೇವೆ ಅಥವಾ ಆನ್ಲೈನ್ ಮೂಲಕ ಸಂಪೂರ್ಣ ಸೇವೆ ಲಭ್ಯ, ಪೋಲಿಸ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ, ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಉತ್ಕೃಷ್ಟ ವೈದ್ಯಕೀಯ ಸಂಶೋಧನ ಕೇಂದ್ರ ಸ್ಥಾಪನೆ, ಶಿಕ್ಷಣಕ್ಕೆ ಸಂಬಂಧಿಸಿದಂತೆ ಎಲ್ಲಾ ಸರ್ಕಾರಿ ಶಾಲಾ ಕೊಠಡಿಗಳನ್ನು ಸ್ಮಾರ್ಟ್ ಕೊಠಡಿಗಳನ್ನಾಗಿ ಪರಿವರ್ತನೆ ಸರ್ವರಿಗೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣ , ಇನ್ನು ಕೃಷಿಗೆ ಸಂಬಂಧಿಸಿದಂತೆ ವೈಜ್ಞಾನಿಕ ಬೆಳೆ ಮತ್ತು ಬೆಲೆ ಪದ್ಧತಿ ಜಾರಿ ,ಜೊತೆಗೆ ಪಾರದರ್ಶಕ ಮಾರುಕಟ್ಟೆ ವ್ಯವಸ್ಥೆ ಮೂಲಕ ಉತ್ತಮ ಬೆಲೆ ಖಾತ್ರಿ ,ಇನ್ನು ಮಹಿಳೆ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದ ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಏಳಿಗೆಗಾಗಿ ಹಾಗೂ ಬಡತನ ನಿರ್ಮೂಲನೆಗಾಗಿ ಮದ್ಯ ನಿಷೇಧ, ಇನ್ನು ನೂರಾರು ಅನೇಕ ಪ್ರಣಾಳಿಕೆಗಳಿದ್ದು ನಮ್ಮ ಕೆ ಆರ್ ಎಸ್ ಪಕ್ಷದ ಈ ಚಾರಿತ್ರಿಕ ರಾಜಕೀಯ ಹೋರಾಟದಲ್ಲಿ ಕನ್ನಡ ನಾಡಿನ ನಾಡಿಗರೆಲ್ಲರೂ, ಈ ಚುನಾವಣೆಯಲ್ಲಿ ಕೆ ಆರ್ ಎಸ್ ಪಕ್ಷವನ್ನು ಬೆಂಬಲಿಸುವ ಮತ್ತು ನಮ್ಮ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ ನಮ್ಮೊಡನೆ ಕೈಜೋಡಿಸಬೇಕು ಎಂದು ನಾವು ವಿನಮ್ರವಾಗಿ ಕೋರುತ್ತೇವೆ ಎಂದರು.
ಇನ್ನು ಈ ಸಂದರ್ಭದಲ್ಲಿ ಕೆ ಆರ್ ಎಸ್ ಪಕ್ಷದ ತಾಲೂಕು ಸಂಚಾಲಕರಾದ ಭಾಗ್ಯಮ್ಮ, ದೇವರಾಜು, ಪದಾಧಿಕಾರಿಗಳಾದ ಧರ್ಮಣ್ಣ ,ಧರ್ಮಣ್ಣ ಎ, ವಾಸು ಚಿದಾನಂದ್, ಕಮಲಮ್ಮ, ವನಿತಾ, ವಿನೋದ ಚಿಕ್ಕೋನಹಳ್ಳಿ, ಹರೀಶ್, ಹರೀಶ್ ಡಿ, ಪ್ರಕಾಶ್ ಮುನಿಯೂರು , ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA