ಲೋಕಸಭೆ ಚುನಾವಣೆಗೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಂಡಾಯದ ಬಾವುಟ ಹಾರಿಸಿದ್ದಾರೆ.
ಹೌದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಿನ್ನೆ ನಡೆದ ಬೆಂಬಲಿಗರ ಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಪಕ್ಷ ಉಳಿಸಲು ನನ್ನ ಈ ಹೋರಾಟ ನಾನು ಹಿಂದುತ್ವ ಮೇಲೆ ಚುನವಣೆ ಮಾಡುತ್ತೇನೆ. ಬಿವೈ ರಾಘವೇಂದ್ರ ಲಿಂಗಾಯತ ಮೇಲೆ ಚುನಾವಣೆ ಮಾಡುತ್ತಾರೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


