ತುಮಕೂರು: ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಅವರು ಕ್ಷೇತ್ರದ ತುಯಾಲಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡು ಹಾಡುವ ಮೂಲಕ ಸಾರ್ವಜನಿಕರನ್ನು ರಂಜಿಸಿದ್ದಾರೆ.
ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಅವರು ಶಿವಪ್ಪ ಕಾಯೋ ತಂದೆ ಮೂರು ಲೋಕ ಸ್ವಾಮಿ ದೇವ ಎನ್ನುವ ಹಾಡು ಮತ್ತು ಇದು ಸೋಮನ ಅವತಾರ ರಾಮನ ಅವತಾರ ಎನ್ನುವ ಹಾಡುಗಳನ್ನು ಹಾಡುತ್ತ ನೆರೆದಿದ್ದ ಸಾರ್ವಜನಿಕರನ್ನು ರಂಜಿಸಿದರು.
ಗುಬ್ಬಿ ತಾಲೂಕಿನ ಹಿಂಡಿಸಿಗೆರೆ ಗ್ರಾಮದಲ್ಲಿ ನಡೆದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಸಹ ಶಾಸಕರ ಮಸಾಲ ಜಯರಾಮ್ ಬಡ್ಡಿ ಹಾಡುವ ಮೂಲಕವೇ ವಿಶೇಷವಾಗಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಇನ್ನೂ ಶಾಸಕರ ಹಾಡಿರುವ ಹಾವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ವರದಿ: ಮಾರುತಿ ಪ್ರಸಾದ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5