ಮಂಡ್ಯ: ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸುಖಧರೆ ಗ್ರಾಮ ನಡೆದಿದೆ.
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುಟ್ಲುಪಾಡಿಯ ಪ್ರೀತಂ ಶೆಟ್ಟಿ (24) ಮೃತಪಟ್ಟ ಯುವಕನಾಗಿದ್ದಾನೆ.
ಸುಖಧರೆ ಗ್ರಾಮದಲ್ಲಿ ಹನುಮ ಜಯಂತಿ ಹಿನ್ನೆಲೆ ತಡರಾತ್ರಿ ಪ್ರೊ.ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿತ್ತು. ಪ್ರೀತಂ ಕಬಡ್ಡಿ ಪಂದ್ಯಾಟ ಮುಗಿಸಿ ರೆಸ್ಟ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೃದಯಾಘಾತದಿಂದ ಕುಸಿದು ಬಿದ್ದ ತಕ್ಷಣವೇ ಅವರನ್ನು ನಾಗಮಂಗಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx