ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಸಿನಿಮಾ ‘ಕಬ್ಜ’ ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ ‘ನಮಾಮಿ ನಮಾಮಿ’ ಎಂಬ ಸುಮಧುರ ಗೀತೆ ಬಿಡುಗಡೆಯಾಗಿದೆ.
ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಖ್ಯಾತ ನಟಿ ಶ್ರೇಯಾ ಶರಣ್ ಈ ಹಾಡಿನಲ್ಲಿ ನಟಿಸಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯಿತು. ಸಾಕಷ್ಟು ಗಣ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಚಿತ್ರ ಸಾಗಿ ಬಂದ ಬಗ್ಗೆ ಹಾಗೂ ಹಾಡಿನ ಕುರಿತು ಮಾಹಿತಿ ನೀಡಿದ ನಿರ್ದೇಶಕ ಆರ್ ಚಂದ್ರು, ‘ಕಬ್ಜ’ ಚಿತ್ರದ ಹಾಡುಗಳನ್ನು ಹೈದರಾಬಾದ್, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಹೋದ ಕಡೆ ಚಿತ್ರದ ಕುರಿತು ಕೇಳಿಬರುತ್ತಿರುವ ಪ್ರಶಂಸನೀಯ ಮಾತುಗಳಿಗೆ ಮನ ತುಂಬಿ ಬಂದಿದೆ. ನನ್ನ ತಂಡಕ್ಕೆ ಹಾಗೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


