ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ವಾರ್ಡ್ ನಂ 19ರಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬಿ ಇ ಓ ಕಚೇರಿ ಕಟ್ಟಲು ಹೊರಟಿರುವ ಆದೇಶವನ್ನು ಹಿಂಪಡೆಯಲು ಒತ್ತಾಯಿಸಿ ಹೋರಾಟ ನಡೆಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಮಿತಿ ಪೂರ್ವಸಭೆ ನಡೆಸಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ., ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ., ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್., ಉಪಾಧ್ಯಕ್ಷರುಗಳಾದ ಶ್ರೀನಿವಾಸ್, ವಿಜಯಕುಮಾರ್, ಶಿವರಾಜ್, ಶಾಲೆಯ ಮಕ್ಕಳ ಪೋಷಕರಾದ ಓಂಕಾರಪ್ಪ, ಪಯಾಜ್, ವೆಂಕಟೇಶ್, ರೂಪ , ಮಂಜುಳ, ರೇಖಾ, ಪಾತಿಮ, ಜಬಿವುಲ್ಲಾ, ಅನಿಫ್, ಲಕ್ಷ್ಮಿ, ಕರಿಯಮ್ಮ, ತೀವ್ರೆಣಿ, ನಿಂಗಮ್ಮ, ವಿದ್ಯಾ, ಅಮ್ಮುಜುಮ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB