ಕುಣಿಗಲ್: ತಾಲ್ಲೂಕಿನ ಕೊತ್ತಗೆರೆ ಹೋಬಳಿ ವ್ಯಾಪ್ತಿಯ ಮಡಿಕೆಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಗುರುವಾರ ಯುತ್ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ನೇತೃತ್ವದಲ್ಲಿ ರಾಯೊಗೊನಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳು ನರೇಗಾ ಯೋಜನೆ ಅಡಿಯಲ್ಲಿ ನಕಲಿ ಜಾಬ್ ಕಾರ್ಡ್ ಆಗೂ ನಕಲಿ ದಾಖಲೆ ಸೃಷ್ಟಿಸಿ ಕಾಮಗಾರಿ ನಡೆಸದೆ ಅಕ್ರಮವಾಗಿ ಬಿಲ್ ಮಾಡುವ ಮೂಲಕ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ ಹಾಗೂ ಮಡಿಕೆಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದರೂ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ರಾಯಗೋನಹಳ್ಳಿ ಗ್ರಾಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಅನುಮತಿ ಇಲ್ಲದೆ ಗ್ರಾಮದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ರಾಮದಲ್ಲಿ ನರೇಗಾ ಯೊಜನೆಯಡಿಯಲ್ಲಿ ಕೆಲಸ ಮಾಡಬೇಕಾದರೆ ಗ್ರಾಮ ಪಂಚಾಯಿತಿ ಸದಸ್ಯರ ಅನುಮತಿ ಪಡೆದು ಕೆಲಸ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಗ್ರಾಮ ಪಂಚಾಯಿತಿಯ ಪಿಡಿಒ ಸದಸ್ಯರ ಪರ ಏಕಪಕ್ಷಿಯವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಗ್ರಾಮಸ್ಥರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಪ್ರತಿಭಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣ ಅಧಿಕಾರಿಗಳು ಬರುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ತೀವ್ರ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾಜಿ,ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೆಂಪಣ್ಣ,ಕಳಸಿಪಾಳ್ಯ ಗ್ರಾಮದ ಅವಿನಾಶ್, ಹೇಮಂತ್, ವೆಂಕಟಲಕ್ಷ್ಮಿ, ನಾಗರಾಜು, ರಘು, ಸುನೀಲ್, ರವಿ, ಸುದೀಪ್, ನಾರಾಯಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5